ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ
ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.