ಬಂಟ್ವಾಳ: ಹಿರಿಯ ರಂಗಕರ್ಮಿ, ನಟ, ನಿರ್ದೇಶಕ, ತರಬೇತುದಾರ, ಸಂಘಟಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಮಂಜುವಿಟ್ಲ ಅವರು ಹಿರಿಯ ತರಬೇತುದಾರರಾಗಿ,
ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕರಾದ ಶ್ರೀ ನಾರಾಯಣ ನಾಯ್ಕ್ ರವರು ಮಾತನಾಡಿ, ” ಎರಡು ರೀತಿಯ ದೇವರು ಕಾಣಸಿಗುವ ಪವಿತ್ರ ಸ್ಥಳವೆಂದರೆ ಅದು ಶಾಲೆ. ಶಿಕ್ಷಕ ವೃತ್ತಿ ಎನ್ನುವುದು ಬಿಳಿ ಬಟ್ಟೆ ಇದ್ದಂತೆ.
ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಮೇಳದ ಅಧ್ಯಕ್ಷ ಜಯರಾಮ್ ಬುಳೇರಿಕಟ್ಟೆ ತಿಳಿಸಿದ್ದಾರೆ. ವಿಟ್ಲದ ಪಂಚಮಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. ವಿವಿಧ ತಳಿಯ ಸಸ್ಯಗಳು, ನೂರಕ್ಕೂ ಹೆಚ್ಚಿನ ಸ್ಟಾಲ್‍ಗಳು, ಕರಾವಳಿ ಹಲಸಿನ ದೋಸೆ ಸೇರಿದಂತೆ ಸುಮಾರು 60 ಬಗೆಯ ದೋಸೆಗಳು, ಉತ್ತರ
ವಿಟ್ಲ: ಸಂಸ್ಕಾರ, ಸಂಸ್ಕೃತಿ ಹಳ್ಳಿಯಲ್ಲಿ ದೃಢವಾಗಿದ್ದು, ಗ್ರಾಮೀಣ ಭಾಗದಲ್ಲಿ ಇದು ವ್ಯತ್ಯಾಸವಾಗದಂತೆ ತಡೆಯುವ ಕಾರ್ಯವಾಗಬೇಕು. ಹಳ್ಳಿಯಲ್ಲಿ ಸಂಸ್ಕಾರದಲ್ಲಿ ವ್ಯತ್ಯಾಸವಾದ ಭಾರತ ಹಾಳಾಗುತ್ತದೆ. ಭಾವನೆಯಿಂದ ಕೂಡಿದ ರಥ ಭಾರತವಾಗಿದ್ದು, ಸನಾತನ ಧರ್ಮದ ರಕ್ಷಣೆಯ ಭಾವವನ್ನು ಎಲ್ಲರೂ ಹೊಂದಿದ್ದಾರೆ. ಹಬ್ಬಗಳ ಆಚರಣೆಯಿಂದ ಸಂಘಟನೆ ಬಲವಾಗುತ್ತದೆ ಎಂದು ಗೌರಿಗದ್ದೆ ಸ್ವರ್ಣ ಪೀಠಿಕಾವುರದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು. ಅವರು ಮಾಣಿಲ ಶ್ರೀಧಾಮ ಶ್ರೀ
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡಿಪೆಂಡೆನ್ಸ್ ಕಪ್ ಕರಾಟೆ ಚಾಂಪಿಂಯನ್‍ಶಿಪ್‍ನಲ್ಲಿ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ತಂ ಡದ ಕರಾಟೆ
ತಾನು ಯಾರೆಂದು ಅರಿತು ಬಾಳಿದಾಗ ಅದು ನಿಜವಾದ ಬದುಕಾಗುತ್ತದೆ. ನಮ್ಮೊಳಗಿನ ಕೆಟ್ಟದ್ದನ್ನು ಬಿಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸವಾಗಬೇಕು. ಹಿರಿಯರಿಗೆ ಗೌರವ ಕೊಡುವ ಮನಸ್ಸು ನಮ್ಮದಾಗಬೇಕು. ಸನಾತನವನ್ನು ಮರೆಯದಿರೋಣ. ಹಿರಿಯರನ್ನು ಮರೆತರೆ ಅಪಾಯ ಖಂಡಿತ. ಜನ್ಮದಿನೋತ್ಸವದ ಆಚರಣೆ ರಾಷ್ಟ್ರೋತ್ತಾನಕ್ಕೆ ಮುನ್ನುಡಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಆ.8ರಂದು ಒಡಿಯೂರು ಶ್ರೀ
ಯಕ್ಷಮಿತ್ರರು-ವಿಟ್ಲ ವಾಟ್ಸಾಪ್ ಬಳಗದವರ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ಸಭಾಂಗಣದಲ್ಲಿ ಆ.13ರಂದು ಮಧ್ಯಾಹ್ನ ಗಂಟೆ 1.30ರಿಂದ ರಾತ್ರಿ ಎರಡು ಗಂಟೆ ವರೆಗೆ ವಿಟ್ಲ ಯಕ್ಷೋತ್ಸವ ನಡೆಯಲಿದೆ ಎಂದು ಸಂಘಟಕ ಸುಬ್ರಹ್ಮಣ್ಯ ಮುರಾರಿ ಭಟ್ ಪಂಜಿಗದ್ದೆ ತಿಳಿಸಿದರು. ಅವರು ಸೋಮವಾರ ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಗಂಟೆ 1.30ಕ್ಕೆ ತೆಂಕು
ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್‍ನಲ್ಲಿ ಯಾಕೆ ಪ್ರತಿಭಟನೆ ನಡೆಸದೆ ಮೌನವಹಿಸಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಆರೋಪಿಸಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದಲಿತ ಮಗು ಮೇಲೆ ಲೈಂಗಿಕ
ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕೇರಳದ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ್(26) ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಅಕ್ಷಯ್ ದೇವಾಡಿಗ, ಸುಕುಮಾರ ಬೆಳ್ಚಡ, ಜಯಪ್ರಕಾಶ್, ಮತ್ತು ಕಮಲಾಕ್ಷ ಎಂಬವರನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡಿದ್ದ ರಾಜನನ್ನು ಮಂಗಳವಾರ ಬಂಧಿಸಿದ್ದು, ಈ ಪ್ರಕರಣದಲ್ಲಿ ಒಟ್ಟು ಐದು
ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು ತಿಳಿಯೋಣ ಎಂದು ಜನಪದ ಚಿಂತಕರು ಹಾಗೂ ಉದ್ಯಾವರ ಎಸ್ ಡಿ ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ|| ವೈ.ಯನ್.ಶೆಟ್ಟಿಯವರು ಹೇಳಿದರು. ಅವರು ಮಾಣಿ ಪೆರಾಜೆಯ ವಿದ್ಯಾನಗರಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.30ರಂದು ನಡೆದ ಆಟಿಡೊಂಜಿ