Home Archive by category ವಿಟ್ಲ (Page 5)

ವಿಟ್ಲ : ಮನೆಯ ಮೇಲೆ ಬಿದ್ದ ಪಿಕಪ್ ವಾಹನ, ಮನೆಯೊಳಗೆ ಸಿಲುಕಿಕೊಂಡ ಮಹಿಳೆ

ವಿಟ್ಲ: ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು,

ವಿಟ್ಲ : ಕಾರು ಅಪಘಾತ – ಚಾಲಕಿಗೆ ಗಾಯ

ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರೊಂದು ವಿರುದ್ಧ ಬದಿಯಲ್ಲಿ ಬರುತ್ತಿದ್ದ ಬೇರೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲದಲ್ಲಿ ನಡೆದಿದೆ. ಸೂರಿಕುಮೇರು ಪೆಟ್ರೋಲಿಯಂ ಪಂಪ್ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಬಂಟ್ವಾಳ ಬಿಸಿರೋಡು ನಿವಾಸಿ ರಮ್ಯ ಅವರು ಕಾರಿನಲ್ಲಿ ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿ ಕೆಳಗೆ ರಸ್ತೆಗೆ

ವಿಟ್ಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಮೃತ

ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿಕೇಶವ ನಾಯ್ಕ ಎಂ (51) ಮೃತಪಟ್ಟವರು.‌ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಪಾಪನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ

ವಿಟ್ಲ : ನೀರಿನ ಟ್ಯಾಂಕ್ ಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಟ್ಲ: ಮಹಿಳೆಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಇದಕ್ಕೆ ಸ್ಥಳೀಯವಾಗಿ ಆಯುರ್ವೇದಿಕ್ ಚಿಕಿತ್ಸೆ ಮಾಡಿದರು ನೋವು ಕಡಿಮೆ ಯಾಗದಿರುವುದರಿಂದ ಜೀವನದಲ್ಲಿ

ಮಾಣಿಲ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು

ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆ

ವಿಟ್ಲ: ಜೀವ-ದೇವನ ಸಂಬಂಧ ಯೋಗದಲ್ಲಿದೆ. ಬದುಕನ್ನು ಹೇಗೆ ರೂಪಿಸಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳುವುದುಅಗತ್ಯವಿದೆ. ಶಿಸ್ತು ಸ್ವಚ್ಛತೆ ಇದ್ದಲ್ಲಿ ಸದಾಚಾರ ಸಂಪನ್ನತೆಯಾಗುತ್ತದೆ. ಮನಸ್ಸಿನ ಸ್ವಾಸ್ಥ್ಯ ಕ್ಕೆ ಯೋಗ ಅಗತ್ಯ. ಬಾಲವಿಕಾಸ ವಿದ್ಯಾಸಂಸ್ಥೆ ವ್ಯಕ್ತಿ ವಿಕಾಸದ ಜೊತೆಗೆ ರಾಷ್ಟ್ರ ವಿಕಾಸಕ್ಕೆ ನಾಂದಿಯಾಗಲಿದೆ. ಸತ್ಪ್ರಜೆ ಎನ್ನುವ ನಾಣ್ಯ ಚಲಾವಣೆ ಯಾಗಲು ಪೋಷಕರು ಹಾಗೂ ಶಿಕ್ಷಕರು ಜೊತೆಗಿರಬೇಕು ಎಂದು ಒಡಿಯೂರು ಶ್ರೀಗುರುದೇವದತ್ತಸಂಸ್ಥಾನಜ

ವಿಟ್ಲ: ಬಸ್‌ ಡ್ರೈವರ್‌ ಹೃದಯಾಘಾತದಿಂದ ನಿಧನ

ವಿಟ್ಲ: ಖಾಸಗಿ ಬಸ್‌ನ ಡ್ರೈವರ್‌ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು. ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ. ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು. ಅವರಿಗೆ ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರಿಗೆ ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂಗ್ರಹಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ

ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರವಾಗಿ ಅಭ್ಯಾಸ ಮಾಡಿ ಶಿಕ್ಷಣದಲ್ಲಿ ಸಾಧನೆ ಮಾಡಬೇಕು : ಪೂರಣ್ ವರ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ ಬಂಟ್ವಾಳ ತಾಲೂಕು ಇದರ ವಿಸ್ತೃತ ನೂತನ ವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿದರು. ನೂತನ ಶಿಕ್ಷಣ ಸಂಸ್ಥೆಯ ವ್ಯವಸ್ಥೆಯಲ್ಲಿ ಆಧುನಿಕ ಸೌಲಭ್ಯದ ಬಗ್ಗೆ ಪರಿಶೀಲನೆ ನಡೆಸಿ ವಿವಿಧ ಮಾಹಿತಿಯನ್ನು ಪಡೆದುಕೊಂಡರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕ

ರಸ್ತೆಯಲ್ಲಿ ದನ ಅಡ್ಡ ಬಂದ ಹಿನ್ನಲೆ : ರಿಕ್ಷಾ ಮಗುಚಿ ಬಿದ್ದು ಜಖಂ

ವಿಟ್ಲ: ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡಿದೆ. ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು ೫೦ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ