Home Archive by category ವಿಟ್ಲ (Page 7)

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ : ವಿಟ್ಲ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು

ಏಪ್ರಿಲ್ 11ರಂದು ವಿಟ್ಲ ಅರಮನೆಯಲ್ಲಿ ತ್ರಿಕಾಲ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ ತ್ರಿಕಾಲ ಪೂಜಾ ಸಮಿತಿ ವತಿಯಿಂದ ವಿಟ್ಲದ ಅರಮನೆಯಲ್ಲಿ ಏಪ್ರಿಲ್ 11 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ವಿಟ್ಲ ಅರಮನೆಯಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಏಪ್ರಿಲ್ 11 ರಂದು ವಿಟ್ಲ ಸೀಮೆಯ ಡೊಂಬ ಹೆಗ್ಗಡೆ ಮನೆತನದ ಅರಮನೆಯಲ್ಲಿ ಶ್ರೀದೇವಿಯ ಪ್ರೀತ್ಯರ್ಥವಾಗಿ ಸಮಸ್ತ ಸಮಾಜದ ಒಳಿತಿಗಾಗಿ ಅರಮನೆಯ ಮಠದಲ್ಲಿ ಶ್ರೀದೇವಿಗೆ ತ್ರಿಕಾಲ ಪೂಜೆ ನಡೆಯಲಿದೆ.

ವಿಟ್ಲ: ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಓರ್ವ ಸಾವು: ಕಾಶಿಮಠ ದಲ್ಲಿ ಘಟನೆ

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿದ್ದಾರೆ

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ

ಉಚಿತ ವೈದ್ಯಕೀಯ ತಪಾಸಣಾ ಶಿಬಿರ:ವಿಟ್ಲದ ಒಕ್ಕೆತ್ತೂರು ಶಾಲೆಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೆತ್ತೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್ ಸಿಎಚ್ ಅವರು

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-

ವಿಟ್ಲ: ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಪತಿಯ ಕೊಲೆ

ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ

ವಿಟ್ಲ: ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಎನ್.ಐ ಎ ವಶಕ್ಕೆ

ವಿಟ್ಲ: ಫ್ರೀಡಂ ಎಜ್ಯುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಇಡ್ಕಿದು ಗ್ರಾಮದ 213ನೇ ಸರ್ವೇ ನಂಬರ್ ನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿದ್ದು, ಪಿ.ಎಫ್.ಐ. ಸದಸ್ಯರಿಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ಶಸ್ತ್ರಾಸ್ತ್ರ ತರಬೇತಿಯನ್ನು ನೀಡುತ್ತಿದೆ ಎಂದು ತನಖೆ ನಡೆಸಿ, ಎನ್. ಐ. ಎ. ಕಾನೂನು ಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ. 1967 ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಕೃತ್ಯಕ್ಕೆ ಬಳಸಿದ

ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಕಾರು ಪಲ್ಟಿ

ವಿಟ್ಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿದೆ. ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ : ವಿಠಲ ಸುವರ್ಣ ರಂಗ ಮಂದಿರದ ವಿಧ್ಯಾರ್ಥಿಗಳಿಗೆ ಪ್ರಶಸ್ತಿ

ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದಾರೆ.ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ, ವಿಟ್ಲ ಜೇಸೀಸ್ ಸ್ಕೂಲ್ 1.ಧ್ರುವ ಕಟಾ:1st ಕುಮಿಟೆ:1st 2.ಸಾನ್ವಿ ಕಟಾ:3rd ಕುಮಿಟೆ:3rd 3.ಮನಸ್ವಿ ಬಿ ಕುಮಿಟೆ:3rd