Home Archive by category ಶೈಕ್ಷಣಿಕ (Page 12)

ಉಳ್ಳಾಲದ ಮೊಗವೀರ ಬಾಲಕಿಯ ಮಹತ್ತರ ಸಾಧನೆ

ಉಳ್ಳಾಲ: 2024ರ ಮೇ, ತಿಂಗಳಲ್ಲಿ ಅಮರಿಕಾದ ನ್ಯೂಯಾರ್ಕ್‌ನಲ್ಲಿ ಜರಗುವ ವರ್ಲ್ಡ್ ಸೈನ್ಸ್ ಸ್ಕಾಲರ್ ಕಾರ್ಯಕ್ರಮಕ್ಕೆ ಉಳ್ಳಾಲದ ಮೊಗವೀರ ಸಮಾಜದ ಬಾಲಕಿ ಸಿಂಧೂರಳಿಗೆ ಆಹ್ವಾನ ಬಂದಿದ್ದು, ಮುಂದಿನ ತಿಂಗಳು ತಾಯಿ ಮಗಳು ಇಬ್ಬರು ಭಾಗಿಯಾಗಲಿದ್ದಾರೆ ಎಂದು ಬಾಲಕಿಯ ತಾಯಿ ಶಿಬಾನಿ ರಾಜಾ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್‌ಕ್ಲಬ್ ನಲ್ಲಿ

SSLC ವಾರ್ಷಿಕ ಪರೀಕ್ಷೆ: ಪುತ್ತೂರು, ಕಡಬದಲ್ಲಿ ಪ್ರಥಮ ದಿನ 42 ವಿದ್ಯಾರ್ಥಿಗಳು ಗೈರು

ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ

ಮಾರ್ಚ್ 25ರಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ

ಮೂಡುಬಿದಿರೆ : ಆಳ್ವಾಸ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ

ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ ತರಬೇತುದಾರರಾದ ಡಾ.ಸರಸ್ವತಿಯವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗು ವಿವಿಧ ಸ್ಪರ್ಧಾತ್ಮಕ

ಮಕ್ಕಳ ಚೆಸ್ ಕಾರ್ನಿವಾಲ್ 2024 : ಗೊನ್ಝಾಗ ಶಾಲೆಗೆ ದ್ವಿತೀಯ ಸ್ಥಾನ

ಮಂಗಳೂರಿನ ಡೆರೆಕ್ ಚೆಸ್ ಸ್ಕೂಲ್ ಇವರು ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು ಇಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಚೆಸ್ ಕಾರ್ನಿವಾಲ್ 2024 ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಗೊನ್ಝಾಗ ಶಾಲೆಯ 5ನೇ ತರಗತಿಯ ವಿಹಾನ್ ಆದರ್ಶ ಲೋಬೊ, 6ನೇ ತರಗತಿಯ ಝರಾ ಖಾಜಿ, 2ನೇ ತರಗತಿಯ ಮಾರ್ಕ್ ಬ್ಲೇಸಿಯಸ್ ಡಿ’ಸೋಜಾ ಮತ್ತು 2ನೇ ತರಗತಿಯ ಮಾನ್ವಿ ಸಾಯಿ ಕುಡ್ವ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ

ಎಸ್.ಡಿ.ಎಂ. ಗಣರಾಜ್ಯೋತ್ಸವ

ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಯ

ಉಜಿರೆ ಕಾಲೇಜು ಎನ್. ಎಸ್. ಎಸ್. ಕ್ಯಾಂಪ್-ಗೆ ಚಾಲನೆ 

ಗುರಿಪಳ್ಳ,  ಜ. 27: ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಾಕ್ಕಾಗಿ ಯುವಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ ಸುಧೀರ್ಘ ಏಳುದಿನಗಳ ಕಾಲ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರವು ಜ.27 ರಂದು ಉದ್ಘಾಟನೆ ಗೊಂಡಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ   ಉಜಿರೆಯ

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ

ವಸ್ತು ವಿಜ್ಞಾನ ಕ್ಷೇತ್ರದಲ್ಲಿ ಪ್ರೊ. ಅಂಜನಾದೇವಿ ಸಾಧನೆ: ಜರ್ಮನಿಯ ಐಎಫ್ ಡಬ್ಲ್ಯೂ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆ

ಜರ್ಮನಿಯ ಡ್ರಸ್ಡೆನ್ನಿನ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಕೆಮಿಸ್ಟ್ರಿ ಯ ನಿರ್ದೇಶಕರಾಗಿ ಮಂಗಳೂರು ಮೂಲದ ಪ್ರೊ. ಅಂಜನಾದೇವಿಯವರು ಆಯ್ಕೆಯಾಗಿದ್ದಾರೆ. ಈ ಕುರಿತು ಜರ್ಮನಿಯ ಲೈಬ್ನಿಚ್ ಘನ ಸ್ಥಿತಿ ಮತ್ತು ವಸ್ತುಗಳ ಸಂಶೋಧನಾ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ತನ್ನ ಹಿರಿಯ ಡಾಕ್ಟರಲ್ ವಿದ್ಯಾರ್ಥಿಗಳಲ್ಲಿ ಜರ್ಮನಿಯಲ್ಲಿ ಇಂತಹ ಉನ್ನತ ಹುದ್ದೆಯನ್ನು ಅಲಂಕರಿಸಿರುವವರಲ್ಲಿ ಪ್ರೊ. ದೇವಿಯವರು