ಉಜಿರೆ ಶ್ರೀಧ ಮಂ ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಶನಿವಾರ ಭೇಟಿ ನೀಡಿ ಪುರಾತನ ಸಾಹಿತ್ಯದ ಪರಿಕರಗಳನ್ನು ವೀಕ್ಷಿಸಿದರು. ಸ್ವತಃ ಕೈಯಲ್ಲಿ ಮುದ್ರಿಸಲಾದ ಹಾಳೆಗಳಲ್ಲಿ ಚಿನ್ನದ ಮಿಶ್ರಣವನ್ನು ಸೇರಿಸಿ ಬರೆಯಲಾದ ಲಿಪಿಗಳನ್ನು ಹಾಗೂ ಹಿಂದಿನ ತಾಳೆಗರಿಗಳು, ಪುಸ್ತಕಗಳು ಹಾಗೂ
ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ
ಹಿಂದಿನ ಕಾಲದಲ್ಲಿ ಗ್ರಾಹಕನಿಗಿಂತ ವ್ಯಾಪಾರಸ್ಥನ ಹಿತಾಸಕ್ತಿಯನ್ನು ಗಮನಿಸಲಾಗುತ್ತಿತ್ತು, ಗ್ರಾಹಕರ ಆಯ್ಕೆಗೆ ಅವಕಾಶ ಇರುತ್ತಿರಲಿಲ್ಲ. ಆದರೆ ಗ್ರಾಹಕರ ಸಂರಕ್ಷಣಾ ಕಾಯ್ದೆ, 1986 ಚಾಲ್ತಿಗೆ ಬಂದ ನಂತರ ಗ್ರಾಹಕರಿಗೂ ಮಾರುಕಟ್ಟೆಯಲ್ಲಿ ಮಹತ್ವ ದೊರಕಿತು. ನಾವು ಜಾಗೃತ ಹಾಗೂ ಎಚ್ಚರಿಕೆಯ ಬಳಕೆದಾರ ಹಾಗೂ ಗ್ರಾಹಕರಾಗಬೇಕು ಎಂದು ಶ್ರೀ ಧ. ಮಂ ಕಾಲೇಜಿನ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು. ಉಜಿರೆ ಶ್ರೀ ಧ. ಮಂ ಕಾಲೇಜಿನ ವಾಣಿಜ್ಯ ವಿಭಾಗವೂ
ಪ್ರತಿಯೊಬ್ಬನಿಗೂ ಮನಶ್ಶಾಸ್ತ್ರ ತುಂಬಾ ಅವಶ್ಯಕವಾಗಿದೆ ಮಾನಸಿಕ ಆರೋಗ್ಯ ಕೂಡ ಇಂದಿನ ದಿನಗಳಲ್ಲಿ ಅತೀ ಮುಖ್ಯ . ಇಂತಹ ಸಂಧರ್ಭಗಳಲ್ಲಿ ಮಾನಸಿಕ ಸುವ್ಯವಸ್ಥೆಯ ಬಗ್ಗೆ ಹಾಗೂ ಮಾನಸಿಕ ವೈಕಲ್ಯಗಳ ಬಗ್ಗೆ ಜಾಗ್ರತಿ ಮೂಡಿಸುವ ಬಿತ್ತಿ ಚಿತ್ರಗಳು ಒಂದು ಒಳ್ಳೆಯ ಕೆಲಸವಾಗಿದೆ ಎಂದು ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಶ್ಲಾಘಿಸಿದರು. ಉಜಿರೆಯ ಶ್ರೀ ಧ.ಮ ಕಾಲೇಜಿನ ಮನಶ್ಶಾಸ್ತ್ರ ವಿಭಾಗವು ವಿಶ್ವ ಅಂಗವೈಕಲ್ಯ ದಿನದ
ಉಜಿರೆ: ಜ್ಞಾನ ಪಡೆಯಲು ಹಲವಾರು ಮಾರ್ಗಗಳಿವೆ, ಅವುಗಳತ್ತ ಸಾಗಬೇಕಾಗಿರುವುದು ನಮ್ಮ ಕರ್ತವ್ಯ. ಇಕೋ ಸೃಜನಎಂದರೆ ಸಾಹಿತ್ಯ ಭಾಷೆಯಲ್ಲಿ ತಗೋ ಸೃಜನಶೀಲತೆ ಎಂದರ್ಥ ಎಂದು ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲಡಿ.ಯದುಪತಿ ಗೌಡ ಹೇಳಿದರು. ಎಸ್.ಡಿ.ಎಂ.ಕಾಲೇಜಿನ ಅರ್ಥಶಾಸ್ತ್ರssss ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಸಹಯೋಗದಲ್ಲಿ ನಡೆದ ಇಕೋ ಸೃಜನ್ ೨೦೨೨ರಕಾರ್ಯಕ್ರಮನ್ನು ಉದ್ಘಾಟಿಸಿ ಇವರು ಮಾತನಾಡಿದರು. ಬತ್ತಿ ಹಾಗೂ ಎಣ್ಣೆ ಬೇರೆ ಬೇರೆಯಾಗಿದ್ದರೆ
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ
ಪ್ರತಿಭಾನ್ವಿತ ಬರಹಗಾರರು ತಮ್ಮ ವಿಶಿಷ್ಟ ದೃಷ್ಟಿಕೋನಗಳಿಂದ ಸಮಾಜವನ್ನು ಭಿನ್ನವಾಗಿ ಗ್ರಹಿಸುವ ಮಾದರಿಗಳನ್ನು ಕೊಡುಗೆಗಳನ್ನಾಗಿ ನೀಡುತ್ತಾರೆ ಎಂದು ಸೋನಿಯಾ ವರ್ಮಾ ಅಭಿಪ್ರಾಯಪಟ್ಟರು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿದ್ದ ಸದಾನಂದ.ಬಿ ಮುಂಡಾಜೆಯವರÀ ‘ಜಲ್ಲಿ ಕಲ್ಲುಗಳು’ ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ
ರಸ್ತೆ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಏನಾಗುತ್ತದೆ ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಸಂಚಾರಿ ಪೊಲೀಸರ ಕಣ್ಣಿಗೆ ಬಿದ್ದರೆ ದಂಡಕಟ್ಟಬೇಕಾಗುತ್ತದೆ. ಆದರೆ ಶನಿವಾರ ಉಜಿರೆಯು ಇದಕ್ಕೆ ತದ್ವಿರುದ್ಧದ ವಿದ್ಯಮಾನಕ್ಕೆ ಸಾಕ್ಷಿಯಾಯಿತು.ಹೆಲ್ಮೆಟ್ ಧರಿಸದೆ ಇರುವವರು, ಹೆಚ್ಚು ವೇಗದಲ್ಲಿ ವಾಹನ ಚಲಾಯಿಸುವವರು, ಸೀಟ್ ಬೆಲ್ಟ್ ಧರಿಸದವರೂ ಸೇರಿದಂತೆ ರಸ್ತೆ ನಿಯಮ ಉಲ್ಲಂಘಿಸಿದವರನ್ನು ನಿಲ್ಲಿಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ತೃತೀಯ ವರ್ಷದ ವಾಣಿಜ್ಯ ವಿಭಾಗದ
ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.


























