Home Archive by category ಶೈಕ್ಷಣಿಕ (Page 8)

ಎಸ್ ಎಸ್ ಎಲ್ಸಿ ಪರೀಕ್ಷೆ : ಕಲ್ಲಬೆಟ್ಟು ಮೊರಾಜಿ೯ ದೇಸಾಯಿಗೆ ಶೇ 100 ಫಲಿತಾಂಶ

ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತವಾಗಿ ಶಾಲೆಗೆ ಶೇ. 100 ಫಲಿತಾಂಶವನ್ನು ನೀಡಿರುತ್ತಾರೆ. 43 ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಡಿಸ್ಟಿಕ್ಷನ್‌ ಅಂಕ ಪಡೆದು ಸಾಧನೆ

ಪುತ್ತೂರಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಸಮರ್ಥ್ ಶೆಟ್ಟಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು ಡಿಸ್ಟಿಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಬೆಳ್ಳಾರೆ ನಿವಾಸಿಯಾಗಿರುವ ಪುಷ್ಪರಾಜ್ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಸಮರ್ಥ್ ಶೆಟ್ಟಿ ಅವರು ಎಸ್‌ಎಸ್‌ಎಲ್‌ಸಿ ಮಹತ್ತರ ಸಾಧನೆ ಮಾಡಿದ್ದಾರೆ. ಕನ್ನಡದಲ್ಲಿ 95,ಇಂಗ್ಲಿಷ್‌ನಲ್ಲಿ97, ಹಿಂದಿಯಲ್ಲಿ 92,

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ವಿಭಾಗದಲ್ಲಿ 03 ರ್‍ಯಾಂಕ್

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು

ಸುಳ್ಯ : ಎನ್.ಎಂ.ಸಿ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ

ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ

ದ್ವಿತೀಯ ಪಿಯುಸಿ ಫಲಿತಾಂಶ – ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಮಿಸಾಂ ಆತೀರ ಖಾನ್ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ರ್‍ಯಾಂಕ್

ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ 45 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 133 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 27 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮಿಸಾಂ ಆತೀರ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ – ದ.ಕ ಜಿಲ್ಲೆಯ ಅಮೂಲ್ಯ ಕಾಮತ್, ದೀಪಶ್ರೀ ರಾಜ್ಯಕ್ಕೆ ಪ್ರಥಮ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಆದರಂತೆ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪ್ರಕಟವಾಗಿದೆ. ಬೆಂಗಳೂರಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25ನೇ ಸಾಲಿನ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು

ಮಂಗಳೂರು : ದ್ವಿತೀಯ ಪಿಯು ಫಲಿತಾಂಶ ಪ್ರಕಟ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾಲಯ) ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ, ಏಪ್ರಿಲ್ 8 ರಂದು ಪ್ರಕಟಿಸಲಾಯಿತು. ಕರ್ನಾಟಕ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶಗಳನ್ನು ಪ್ರಕಟಿಸಿತು. ಉಡುಪಿ ಜಿಲ್ಲೆ ಶೇ. 93.90 ರಷ್ಟು ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ರಷ್ಟು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಕುರಿತು ಸಮೂಹ ಚರ್ಚೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು

ಮಂಗಳೂರು : ಕಣಚೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ಆರ್‌ಜಿಯುಎಚ್‌ಎಸ್ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಸಾಧನೆ

ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಶ್ರೀರಾಮ್ ಗೆ ಬಿ. ಸಿ. ಎ. ವಿಭಾಗದಲ್ಲಿ 9ನೇ ರ್‍ಯಾಂಕ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್‍ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.