ಸುಬ್ರಹ್ಮಣ್ಯ : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ರಕ್ಷಿತಾ ಅವರು ಕುಟುಂಬ ಸಮೇತರಾಗಿ ಇಂದು ಗುರುವಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಮಹಾಪ್ರಸಾದ ಸ್ವೀಕರಿಸಿದರು.ತದನಂತರ ಕ್ಷೇತ್ರದ ದೈವ ಹೊಸಳ್ಳಿಗಮ್ಮ ಗುಡಿಯಲ್ಲಿ ದರ್ಶನ ಮಾಡಿ ಅಲ್ಲಿಂದ ಮುಂದೆ ಶ್ರೀ ದೇವಳದ ಆಡಳಿತ ಕಚೇರಿಗೆ ತೆರಳಿದರು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ, ಸಾಹಿತಿ ಟಿ. ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ . ಜನವರಿ ತಿಂಗಳಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಗೌರವದನ ಒಂದು ಲಕ್ಷದೊಂದಿಗೆ ಪ್ರಶಸ್ತಿ ಪ್ರಧಾನ
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬಳಿಕ
ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ
ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು
ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಪವರ್ ಫುಲ್ ಡೈಲಾಗ್ ಹೊಂದಿರುವ ಟೀಸರ್ ನೋಡುಗರಲ್ಲಿ
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ ಸುಮುಖ ಪ್ರೊಡಕ್ಷನ್ ಮೊದಲ ಸಿನಿಮಾಕ್ಕೆ ತುಳುನಾಡಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ
ಮಂಗಳೂರು: ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್




























