ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿಯಾಗಿ ಸರ್ವೀಸ್ ರಸ್ತೆಯಿಂದ ಪಕ್ಕದ ಕಮರಿಗೆ ಉರುಳಿದ ಘಟನೆ ಸುರತ್ಕಲ್ ಎನ್‌ಐಟಿಕೆ ಬಳಿ ನಡೆದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿಕರಿಲ್ಲದ ಕಾರಣ ಬಹುದೊಡ್ಡ ದುರಂತ ತಪ್ಪಿ ಹೋಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾದ ರಭಸಕ್ಕೆ ನಜ್ಜುಗುಜ್ಜಾಗಿದೆ. ಓವರ್
ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ
ಮಂಗಳೂರು: ನಗರದಲ್ಲಿ ಭಾರಿ ಮಳೆ ಮುಂದುವರಿದಿದೆ. ನಗರದ ಹೊರ ವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಜರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್, ಜಪ್ಪಿನಮೊಗರು ಮತ್ತಿತರ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿದಿದೆ. ಮನೆಯೊಳಗೆ ತುಂಬಿದ್ದ ಕೆಸರು ನೀರನ್ನು ಸ್ವಚ್ಛಗೊಳಿಸುವಲ್ಲಿ ಈ ಪ್ರದೇಶದ ನಿವಾಸಿಗಳು ನಿರತರಾಗಿದ್ದಾರೆ. ರಾತ್ರಿಯೂ ಬಿಟ್ಟು ಬಿಟ್ಟು
ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು
ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ
ಮೂಡುಬಿದಿರೆ : ತಾಲೂಕಿನಲ್ಲಿ ಸುರಿದ ಮಳೆ ಗಾಳಿಗೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಲಯ ಎಂಬಲ್ಲಿ ಶೇಖರ ಯಾನೆ ಬೂದ ಎಂಬುವವರ ಮನೆಯ ಛಾವಣಿ ಬುಧವಾರ ಮುಂಜಾನೆ ಸಂಪೂರ್ಣವಾಗಿ ಕುಸಿದು ಬಿದ್ದು ಸುಮಾರು ರೂ ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೂ ಮಲಗಿದ್ದು ಹೆಂಚು ಬಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ, ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ,
ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಗ್ರಾ.ಪಂ. ಪಿಡಿಓ ರಕ್ಷಿತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗ್ರಾಮ ಸಹಾಯಕ ರೀತೇಶ್,
ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ನಸುಕಿನ ಜಾವ 3:50 ರಿಂದ 4:45 ರ ನಡುವೆ ಕೇಳಿದ ಸ್ಫೋಟಗಳಿಂದ ಜಮ್ಮು ನಗರದ ಕೆಲವು ಭಾಗಗಳಲ್ಲಿ ಕತ್ತಲೆಯಾಗಿದ್ದು, ಆಕಾಶದಲ್ಲಿ ಯುದ್ಧಸಾಮಗ್ರಿಗಳು ಕಂಡುಬಂದವು.
ಕೊಕ್ಕಡ: ಪಟ್ಟೂರು ಬಳಿಯ ಪುಂಡಿಕಾಯಿ ತಿರುವಿನಲ್ಲಿ ಗುರುವಾರದಂದು ಜೀಪು ಮತ್ತು ಗೂಡ್ಸ್ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಂಟಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಜೀಪು ಎರಡೂ ಭಾಗಶಃ ಹಾನಿಗೊಳಗಾಗಿವೆ. ಘಟನೆಯಲ್ಲಿ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಸುಂದರಿ, ಗಿರಿಜಾ ಮತ್ತು ಲಲಿತ ಎಂಬ ಮಹಿಳೆಯರು ಹಾಗೂ ರಿಕ್ಷಾ ಚಾಲಕ ಸಿದ್ದಿಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಕೊಕ್ಕಡ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ
ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಶಿವಪ್ರಸಾದ್, ಅತಿಯಾಗಿ ಮದ್ಯ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ನಿನ್ನೆ ತಡರಾತ್ರಿ ಮದ್ಯ