ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ
ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ ಪ್ರದೇಶದ ೩ನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತದ ಆತಂಕ ಎದುರಾಗಿದ್ದು, ಅಲ್ಲಲ್ಲಿ ಗುಡ್ಡ ಬಿರುಕು
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್‌ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು
ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ
ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ
ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿಯ ಸಮಸ್ಯೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನ ಸುರಕ್ಷಿತ
ಉಳ್ಳಾಲದ ಮದನಿ ನಗರದಲ್ಲಿ ಕಂಪೌoಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜೊತೆಗೆ ಸ್ಪೀಕರ್ ಖಾದರ್ ಅವರ ಜೊತೆಗಿದ್ದರು.ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್‌ಗಳನ್ನು ಸರ್ವೇ ನಡೆಸಲು ಸೂಚಿಸಲಾಗಿದೆ. ತೀವ್ರತರದಲ್ಲಿ ಅಪಾಯ ಇರುವ ಸ್ಥಳಗಳಲ್ಲಿ ತುರ್ತು ಪರಿಹಾರ ಕ್ರಮಕ್ಕೆ ಆದೇಶಿಸಲಾಗಿದೆ.
ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.


























