ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್
ಪುತ್ತೂರು: ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಇದೀಗ ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಬೆಳ್ಳಿಪ್ಪಾಡಿ ಕೊಡಿಮರದಿಂದ ಹೊಳೆ ದಾಟಿದ ಆನೆ ಅಲ್ಲಿಂದ ಬೆದ್ರಾಳ ತೋಡು ಮೂಲಕ ಚಿಕ್ಕಮುಡ್ನೂರು ಗ್ರಾಮದ ಧನ್ಯ ಕುಮಾರ್ ಜೈನ್ ಎಣಿಮೊಗರು ಅವರ ತೋಟದಲ್ಲಿ ಹೋಗಿದೆ.
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್
ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ ಬಾರ್ತೋಲಿ ಎಂಬ ತೋಟದಲ್ಲಿ ಕಾಣಿಸಿಕೊಂಡಿದೆ. ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ
ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು
ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್
ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ
ರೆಮಲ್ ಚಂಡಮಾರುತದ ಕಾರಣದಿಂದಾಗಿ ಮಿಜೋರಾಂ, ಅಸ್ಸಾಂಗಳಲ್ಲೂ ಭಾರೀ ಮಳೆ ಹಾಗೂ ಭೂಕುಸಿತದಿಂದ 31 ಮಂದಿ ಮರಣ ಹೊಂದಿದ್ದಾರೆ. ಮಿಝೋರಾಂನಲ್ಲಿ 27 ಮತ್ತು ಅಸ್ಸಾಂನಲ್ಲಿ ನಾಲ್ವರು ಮೃತರಾಗಿದ್ದಾರೆ. ಐಜ್ವಾಲ್ ಹೊರವಲಯದ ಗಣಿ ಕುಸಿತದಲ್ಲಿ ಹದಿನಾಲ್ಕು ಜನರು ಸತ್ತಿದ್ದಾರೆ. ಲಿಮೆನ್, ಸಲೇ, ಫ್ಯಾಲಗ್, ಬಬಾಲ್ ಮೊದಲಾದ ಕಡೆ 13 ಜನ ಎಂದು 27 ಮಂದಿ ಮರಣಿಸಿದ್ದಾರೆ. ಐಜ್ವಾಲ್ ಗಣಿ ಕುಸಿತದಲ್ಲಿ 12 ಮಂದಿ ನಾಪತ್ತೆಯಾಗಿದ್ದು, ಕುಸಿದ ಮಣ್ಣುಗಳಡಿ ಅವರಿಗಾಗಿ ಹುಡುಕಾಟ
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘತಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ ಶಿರ್ವ ಎಂ ಎಸ್ ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಪೂಜಾರಿ (20 )ಮೃತಪಟ್ಟವರು. ಕಳೆದ ರಾತ್ರಿ ಸ್ನಾನ ಮಾಡಲು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ನೆಲಕ್ಕೆ ಬಿದ್ದಿದ್ದ ಅವರನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ
ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ



























