Home Archive by category aluru

ಆಲೂರು : ಸಾರ್ವಜನಿಕ ದೂರು, ಅಹವಾಲುಗಳ ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು ಎಂಟು ಅರ್ಜಿಗಳನ್ನು ಸ್ವೀಕಾರ ಮಾಡಿದ್ದು, ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು ಒಂದು

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ