Home Archive by category benagaluru

ದಿ ಒರಿಜಿನಲ್‌ ಆಭರಣ, ಉಡುಪಿ ಪಾರಂಪರಿಕ ಸ್ವರ್ಣ ಲೇಪಿತ ಬೆಳ್ಳಿ ಆಭರಣಗಳ “ಉತ್ಸವ್ ಸೆಲೆಬ್ರಂಟ್ ಸಂಗ್ರಹ ಬಿಡುಗಡೆ”.

ಉಡುಪಿಯ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಈ ಶುಭದಿನದಂದು “ಉತ್ಸವ್ ಸೆಲೆಬ್ರಂಟ್ ಸಿಲ್ವ‌ರ್ ” ಸಂಗ್ರಹವನ್ನು ಬೆಂಗಳೂರಿನ ಜಯನಗರ ಮತ್ತು ಉಡುಪಿ ಶಾಖೆಯಲ್ಲಿ ಬಿಡುಗಡೆಗೊಳಿಸಲಾಯಿತು. 92.5 ಶುದ್ಧತೆಯ ಬೆಳ್ಳಿಯಿಂದ ತಯಾರಿಸಿದ ಪಾರಂಪರಿಕ ಶೈಲಿಯ ವಿನೂತನ ಬೆಳ್ಳಿಯ ಆಭರಣಗಳ ಪ್ರದರ್ಶನ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಮಾಲಿಕತ್ವದ ಜೂಜು ಮನೆಗಳು,ಜಾರಿ ನಿರ್ದೇಶನಾಲಯದಿಂದ ಸಮಗ್ರ ದಾಳಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ ಪಾಲುದಾರಿಕೆ ಹೊಂದಿರುವುದಾಗಿಯೂ, ಜೂಜು ಅಡ್ಡೆಗಳ ಮಾಲಕತ್ವ ಹೊಂದಿರುವುದಾಗಿಯೂ ಹೇಳಲಾಗುತ್ತಿದೆ. ಜಾರಿ

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ ಉಪನ್ಯಾಸಕರು, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞರು ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು

ಅಧ್ಯಯ‌ನ ನಡೆಸಲು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹ. ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ಚಲುವರಾಯ ಸ್ವಾಮಿ

*ಭತ್ತದ ಕೃಷಿ ಉತ್ತೇಜ‌ನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದರು.ಶಾಸಕರು ಸದನದಲ್ಲಿ ಎತ್ತಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ

ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್

ಬೈಂದೂರು : ಸದನದಲ್ಲಿ ಕಾರ್ಮಿಕರ ಪರ ಧ್ವನಿ ಎತ್ತಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ತಿಳಿಸಿದ್ದಾರೆ.ಉಡುಪಿ‌ ಜಿಲ್ಲೆ ಸಹಿತ ಬೈಂದೂರು ವಿಧಾನಸಭಾ ಕ್ಷೇತ್ರ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ