Home Archive by category benagaluru (Page 3)

ಸಂಗೀತ, ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗು ನೃತ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಮತ್ತು ವಿಟ್ಲ ಸಮೀಪದ ಪಡೀಬಾಗಿಲು ನಿವಾಸಿಯಾದ ಸ್ಯಾಕ್ಸೋಫೆÇೀನ್‍ವಾದಕ ಡಾ.ಪಿ.ಕೆ. ದಾಮೋದರ ರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಾನ ಕಲಾಭೂಷಣ

ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್‍ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ಪ್ರವೀಣ್ ಕೊಲೆ ಖಂಡಿಸಿ ಡಾ.ಪ್ರಣಾವನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಕ.ಸಾ.ಪಗೆ ಒಂದು ಸಾವಿರ ಕೋಟಿ ರೂ ಶಾಶ್ವತ ನಿಧಿ ಸ್ಥಾಪನೆ ತಮ್ಮ ಗುರಿ ; ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ

ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ

ಕಾರ್ಮಿಕ ಕಲ್ಯಾಣ ಮಂಡಳಿ ಅಕ್ರಮಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ: ನಕಲಿ ಕಾರ್ಮಿಕರ ನೋಂದಣಿ ರದ್ದುಗೊಳಿಸಿ : ರಾಮಲಿಂಗಾ ರೆಡ್ಡಿ

ಬೆಂಗಳೂರು, ಸೆ, 27; ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಭಾರೀ ಅಕ್ರಮಗಳ ವಿರುದ್ಧ ತನಿಖೆ ನಡೆಸಬೇಕು. ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಾರ್ಮಿಕ ವಿಭಾಗ ಪದಾಧಿಕಾರಿಗಳು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಮುಂಭಾಗ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಕಲ್ಯಾಣ ಮಂಡಳಿ ನೈಜ

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.   ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್

ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು