ಕಡಬ: ಪೆರ್ಲದಕೆರೆ ಕಡಬದ ಶ್ರೀ ಎಸ್. ಸುಬ್ರಹ್ಮಣ್ಯ ಭಟ್ ಹಾಗೂ ಶ್ರೀಮತಿ ಜಯಲಕ್ಷ್ಮಿ ಭಟ್ ಇವರ ಪುತ್ರಿ ನಂದಿತಾ ಎಸ್. ಭಟ್ ಇವರು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ (ICAI) ನಡೆಸಿದ ಲೆಕ್ಕಪರಿಶೋಧಕರ (CA) ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸೈoಟ್ ಆನ್ಸ್ ಶಾಲೆ, ಕಡಬದಲ್ಲಿ, ಪೂರ್ವ ವಿಶ್ವವಿದ್ಯಾಲಯ
ಕೊಕ್ಕಡ: ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳ ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ದಾಳಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಶ್ರಮದ ಫಲವನ್ನು ಕ್ಷಣಾರ್ಧದಲ್ಲಿ ನಾಶಮಾಡುತ್ತಿರುವ ಘಟನೆಗಳು ಅತಿಯಾಗಿ ಹೆಚ್ಚಾಗಿವೆ. ಇತ್ತೀಚಿನ ಘಟನೆಯಾಗಿ ಶನಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬಾರೆಗುಡ್ಡೆ ಪ್ರದೇಶದಲ್ಲಿ ಕುಶಾಲಪ್ಪ ಗೌಡ ಎಂಬ ರೈತರ ತೋಟಕ್ಕೆ ಕಾಡಾನೆ ದಾಳಿ ನಡೆಸಿ, ಅಪಾರ ಪ್ರಮಾಣದ ಬಾಳೆ, ತೆಂಗು, ಅಡಿಕೆ ತೋಟವನ್ನು
ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತಪಟ್ಟ ಯುವಕ. ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ. ಮೃತರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ.
ಜಾಗತಿಕ ಹಳೆಯ ವಿದ್ಯಾರ್ಥಿಗಳ ಕೂಟ – ನಿಟ್ಟೆ ನೆಕ್ಸಸ್ 2025 ಕಾರ್ಯಕ್ರಮದ ಅಧಿಕೃತ ಆಹ್ವಾನ ಪತ್ರವನ್ನು ಇಂದು ನಿಟ್ಟೆ ಎಜುಕೇಶನ್ ಟ್ರಸ್ಟ್ ಕಚೇರಿ, ರಾಂಭವನ್, ಕೊಡಿಯಾಲ್ಬೈಲ್, ಮಂಗಳೂರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಆಹ್ವಾನ ಪತ್ರವನ್ನು ಶ್ರೀ ವಿಷಾಲ್ ಹೆಗ್ಡೆ, ಕಾರ್ಯದರ್ಶಿ, ನಿಟ್ಟೆ ಎಜುಕೇಶನ್ ಟ್ರಸ್ಟ್ ಅವರಿಂದ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಗಣೇಶ್ ಕಾಣಿಕ್ ಶ್ರೀ ಮುಲ್ಕಿ ಜೀವನ್ ಕೆ. ಶೆಟ್ಟಿ (ಅಧ್ಯಕ್ಷರು, WENAMITAA –
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ ಸಹಿತ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಾದ ಕುಂಬ್ರದ ಬರೋಡ
ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಸಂಪಾಜಿ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಯಕ್ಷಗಾನ ವಿದ್ವಾಂಸರಾದ ಡಾ ಪ್ರಭಾಕರ ಜೋಶಿ ಅಭಿನಂದನಾ ಮಾತುಗಳನ್ನಾಡಿ ನಾರಾವಿ ಯಂತಹ ಗ್ರಾಮೀಣ ಪ್ರದೇಶದಲ್ಲಿ
ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ. ವಿಶ್ವನಾಥ್ ಇತ್ತೀಚೆಗಷ್ಟೇ
ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬೆಳಿಗ್ಗೆ 11.30 ರಿಂದ ನಡೆಯಲಿರುವ ರಾಜ್ಯ ಕಾನೂನು ವಿಶ್ವ ವಿದ್ಯಾನಿಯದ 7ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ
ಕನ್ನಡ ರಾಜ್ಯೋತ್ಸವ 2025ರ ಪ್ರಯುಕ್ತ ಕನ್ನಡ ಹಬ್ಬ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸಂಭ್ರಮ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪರ್ಚಾಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕನ್ನಡ ನಾಡಿನ ನೆಲ ಜಲದ ರಕ್ಷಣೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದ ಅವರು, ವ್ಯವಹಾರಿಕಾವಾಗಿ ಇತರ
ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್.


























