Home Archive by category Fresh News

ಮಂಗಳೂರು: ಅಪ್ಸರಾ ಐಸ್‍ಕ್ರೀಂ ಪ್ರಾಂಚೈಸಿ ಶುಭಾರಂಭ

ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್‍ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್‍ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್‍ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್‍ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್‍ಕ್ರೀಂ ಔಟ್‍ಲೆಟ್ ಉದ್ಘಾಟನೆಗೊಂಡಿದೆ.

ಬ್ರಹ್ಮಾವರ: 3ನೇ ದಿನವೂ ಕಟ್ಟಡ ಸಾಮಾಗ್ರಿ ಸಾಗಾಟ ವಾಹನ ಮಾಲಕರ ಮುಷ್ಕರ, ಮಾತುಕತೆ, ವಿಫಲ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಮೂಲಕ ಮುಷ್ಕರ ನಿರತರೊಂದಿಗೆ ನಡೆದ ಮಾತುಕತೆ ವಿಫಲತೆ ಕಂಡುಬಂದ ಹಿನ್ನೆಲೆಯಲ್ಲಿ ಅರ್ನಿಷ್ಟಾವಧಿ ಮುಷ್ಕರ ಮುಂದುವರಿಯುವ ಸೂಚನೆ ಕಂಡು ಬಂದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಬಸ್

ಮಂಗಳೂರು: ಎಸ್‌ ಸಿ ಎಸ್ ಪಿಯು ಕಾಲೇಜಿನಲ್ಲಿ ಕೋಚಿಂಗ್ ಅಕಾಡೆಮಿ ಉದ್ಘಾಟನೆ

ಮಂಗಳೂರಿನ ಅಶೋಕನಗರದಲ್ಲಿರುವ ಎಸ್.ಸಿ.ಎಸ್. ಪಿಯು ಕಾಲೇಜ್‌ನಲ್ಲಿ ಎಸ್.ಸಿ. ಎಸ್ ಕೋಚಿಂಗ್ ಅಕಾಡೆಮಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಎಸ್.ಸಿ. ಎಸ್ ಸಮೂಹ ಸಂಸ್ಥೆಗಳ ಸೆಕ್ರೆಟರಿ ಡಾ. ಅಭಿನಯ್ ಸೊರಕೆ ಮಾತನಾಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಚಿಂಗ್ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಡಾ. ರಾಜಾರಾಮ್ ಮಾತನಾಡಿ, ಕೋಚಿಂಗ್ ಸ್ವರೂಪ ಅಗತ್ಯತೆ ಹಾಗೂ ಅನಿವಾರ್ಯತೆಯ ಬಗ್ಗೆ ನಿಲುವು ನೀಡಿದರು.

ಮಂಗಳೂರು: ಕರಾವಳಿ ಭಾಗದಲ್ಲಿ ಬಂದ್‍ಗೆ ನೈತಿಕ ಬೆಂಬಲ, ಎಂದಿನಂತೆ ಜನಜೀವನ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ಬಂದ್‍ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್‍ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ, ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆದಿದೆ. ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಬಂಧಿತರು. ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ

ಉಡುಪಿ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರಿಂದ ತರಾಟೆ

ಸದ್ಯ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದ್ದು, ಅಧಿಕೃತ ಮರಳು ಗಣಿಗಳು ಮಾತ್ರ ಕಾರ್ಯಚರಣೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಕ್ರಮ ಮರುಳುಗಾರಿಕೆಯನ್ನ ದುರುಪಯೋಗ ಪಡಿಸಿಕೊಂಡ ಕೆಲ ಪಂಚಾಯತ್ ಸದಸ್ಯರು ತಮ್ಮ ರಾಜಕೀಯ ಪ್ರಭಾವ ಬಳಸಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ವಿವರ ವಿಡಿಯೋ

ಕಡಬ : ವ್ಯಕ್ತಿಯ ಮೇಲೆ ಕಾಡಾನೆ ದಾಳಿ- ಗಂಭೀರ ಗಾಯ

ಕಡಬ: ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಕೊಣಾಜೆ ಮಾರ್ಗವಾಗಿ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ.

ಮಂಗಳೂರು: ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ: ರಂಗಕರ್ಮಿ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ

ಚೆನ್ನೈ: ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ವಿಧಿವಶ

ಪ್ರಖ್ಯಾತ ವಿಜ್ಞಾನಿ ಹಾಗೂ ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ನಿಧನರಾದರು. ಮೊಂಕೊಂಬು ಸಾಂಬಶಿವನ್ ಸ್ವಾಮಿನಾಥನ್ ಅವರು 1925ರ ಆ. 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ, ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ

ನೆಲ್ಯಾಡಿ: ಕೊಕ್ಕಡ-ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಸಂಭ್ರಮದ ಈದ್ ಮಿಲಾದ್

ನೆಲ್ಯಾಡಿ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಮದ್ರಸ ಮಕ್ಕಳು, ಸ್ಥಳೀಯ ಜಮಾಅತರು ಭಾಗವಹಿಸಿದ್ದರು