ಮೂಡುಬಿದಿರೆ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ
ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ
ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು ವಿದೇಶದಲ್ಲಿದ್ದು ಮನೆಯಲ್ಲಿ ತಂಗಿಯೊಂದಿಗೆ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಇವರಿಗೆ ಖಾಯಿಲೆಯೊಂದು ಬಾಧಿಸಿದ್ದು ಇದರಿಂದಾಗಿ ಮಾನಸಿಕವಾಗಿ ಜಿಗುಪ್ಸೆಗೊಂಡಿದ್ದರು. ತಂಗಿ ಶಿರ್ತಾಡಿ ಪೇಟೆಗೆ
ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ
ಮೂಡುಬಿದಿರೆ: ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೋವ೯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಒಂಟಿಕಟ್ಟೆಯಲ್ಲಿ ನಡೆದಿದೆ. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್‌ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ರಾಜೇಶ್ ಅವರು ತಮ್ಮ ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ
ಸುಳ್ಯ. ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜಾನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನ ದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷರಾದ ಕೆ. ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು
ಮಂಗಳೂರು: ಹೈದರಾಬಾದ್‌ನಲ್ಲಿ ನಡೆದ 28ನೇ ಎನರ್ಜಿ ಟೆಕ್ನೋಲಜಿ ಮೀಟ್-2025ರಲ್ಲಿ ದೇಶದ ಪ್ರಮುಖ ಪೆಟ್ರೋಲಿಯಂ ರಿಫೈನರಿಗಳಲ್ಲೊಂದಾದ ಎಂಆರ್‌ಪಿಎಲ್ 2024-25ನೇಸಾಲಿನ ರಿಫೈನರಿ ಟೆಕ್ನಾಲಜಿಯಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ಇನ್ನೋವೇಷನ್ ಅವಾರ್ಡ್ ಗೆದ್ದುಕೊಂಡಿದೆ. ಈ ಮೂಲಕ ಕಂಪೆನಿಯು ಭಾರತ ಸರಕಾರ ಪ್ರಾಯೋಜಿತ ನಾಲ್ಕನೇ ಪ್ರಶಸ್ತಿಗಳನ್ನು ಪಡೆದುಕೊಂಡಂತಾಗಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಚಿವಾಲಯದ ಕಾರ್ಯದರ್ಶಿ ಪಂಕಜ್
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಲಂಡನ್ ಬಂಟ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ, ಕಾರ್ಯದರ್ಶಿಯಾಗಿ ಜೀವಿತ ಚೌಟ, ಕೋಶಾಧಿಕಾರಿಯಾಗಿ ಧೀರಜ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಅಭಿನಂದನಾ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತಾ ಶೆಟ್ಟಿ, ಸಬೀನಾ ಶೆಟ್ಟಿ, ಅಕ್ಷತಾ ಶೆಟ್ಟಿ, ದಿವ್ಯ ಶೆಟ್ಟಿ, ರಮೇಶ್ ಶೆಟ್ಟಿ, ಸೊಲ್ಮೆ ಶೆಟ್ಟಿ, ಧ್ವನಿ ಹೆಗ್ಡೆ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ, ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದಿರೆ ಸಂಯುಕ್ತ ಆಶ್ರಯದಲ್ಲಿ ನಡೆದ




























