Home Archive by category Fresh News (Page 174)

ಮಂಗಳೂರು: ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‍ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ

ಮುಲ್ಕಿ: ಅಯ್ಯಪ್ಪ ಮಂದಿರದಲ್ಲಿ ಪಡಿಪೂಜೆ ಸೇವೆ

ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ ಗಿರೀಶ್ ಪಲಿಮಾರು, ಜ್ಯೋತಿ ಸ್ವರೂಪನಾದ ಅಯ್ಯಪ್ಪನನ್ನು ಸಾಕ್ಷಾತ್ಕಾರಗೊಳಿಸುವ ನಿಟ್ಟಿನಲ್ಲಿ ಈ ದೀಪಾರಾಧನೆ ಅಂದರೆ ಪಡಿಪೂಜೆ ನಡೆಸಲಾಗಿದ್ದು, ಮಾಲೆಧಾರಿಗಳು ವೃತ ನೇಮ ನಿಷ್ಠೆಯಿಂದ ಓಣಂ ಪರ್ವಕಾಲದಲ್ಲಿ ಶಬರಿ ಸನ್ನಿಧಾನಕ್ಕೆ

ಪಡುಬಿದ್ರಿ ; ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ – ಸ್ಕೂಟರ್ ಸಹಸವಾರನಿಗೆ ಗಂಭೀರ ಗಾಯ

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್‍ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ ರಸ್ತೆಯಿಂದ ಕನ್ನಂಗಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುತ್ತಿದಂತೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‍ನ ಹಿಂಬದಿ

ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು ಗೇಟನ್ನು ಕೈಯಿಂದ ತೆರೆದು ಮುಂದೆ ಹೋದಾಗ ಟೋಲ್ ಸಿಬ್ಬಂದಿಗಳು ತಡೆದಿದ್ದು ಆಗ ಯುವಕನೊರ್ವ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ಟೋಲ್ ಸಿಬ್ಬಂದಿಗಳು ಯುವಕರಿಗೆ ಚೆನ್ನಾಗಿ ಬಾರಿಸಿದ್ದಾರೆ.

ಶಿರೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತ್ಯು

ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ

ಅಬುಧಾಬಿ: ಸೆಪ್ಟಂಬರ್ 1ರಂದು ರಕ್ತದಾನ ಶಿಬಿರ-ಪೋಸ್ಟರ್ ಬಿಡುಗಡೆ

ಎಸ್‌ಕೆಎಸ್‌ಎಸ್‌ಎಫ್ ಅಬುಧಾಬಿ ಕರ್ನಾಟಕ ವತಿಯಿಂದ ಬೃಹತ್ ಕರ್ನಾಟಕ ಮೀಲಾದ್ ಕಾನ್ಪ್‌ರೆನ್ಸ್ ಇದರ ಪ್ರಚಾರದ ಭಾಗವಾಗಿ, ಸೆಪ್ಟಂಬರ್ 1 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿ ಖಾಲಿದಿಯ್ಯ ಬ್ಲಡ್ ಬ್ಯಾಂಕ್‌ನಲ್ಲಿ ನಡೆಯಲಿರುವ ರಕ್ತದಾನ ಶಿಬಿರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.   ಕಾರ್ಯಕ್ರಮವು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ವ್ಯವಸ್ಥಾಪಕರೂ, ಎಸ್‌ಕೆಎಸ್‌ಎಸ್‌ಎಫ್

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೂಡುಬಿದಿರೆಯ ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ  2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ 300 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.   ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮಹಮ್ಮದ್ ಹನೀಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಮಾಜ ನಿರ್ಮಾಣದ ಕಾರ್ಯದಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ಮಹತ್ತರವಾದ ಜವಾಬ್ದಾರಿಯಿದೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆವಿಷ್ಕಾರ ಮತ್ತು

ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು. ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ

ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ : ಶೈಕ್ಷಣಿಕ ಗೋಡೆ ಬರಹದ ಅನಾವರಣ

ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು. ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು. ಇದೇ ವೇಳೆ ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅವರು ಮಾತನಾಡಿ, ಮುತ್ತೂಟ್‍ನ ಸಿಎಸ್‍ಆರ್ ಕಾರ್ಯಕ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ