Home Archive by category Fresh News (Page 180)

ಜನಸ್ನೇಹಿ ತಹಶೀಲ್ದಾರರಿಗೆ ಕೊರಗ ಸಂಘಟನೆಯಿಂದ ಬೀಳ್ಕೊಡುಗೆ

ಕಳೆದ 2 ವರ್ಷದಿಂದ ಬ್ರಹ್ಮಾವರ ತಹಶೀಲ್ದಾರರಾಗಿ ಇದೀಗ ಪದೊನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಗೊಂಡ ರಾಜಶೇಖರ ಮೂರ್ತಿಯವರನ್ನು ಕೊರಗ ಅಭಿವೃದ್ಧಿ ಸಂಘ ಮಟಪಾಡಿ ಬಲ್ಜಿ ಮತ್ತು ಹುಭಾಶಿಕ ಕೊರಗರ ಯುವ ಕಲಾ ವೇದಿಕೆ ಬಾರಕೂರು ವತಿಯಿಂದ ಕೊರಗ ಭವನದಲ್ಲಿ ಸನ್ಮಾನಿಸಿ ಬಿಳ್ಕೋಡುಗೆ ಮಾಡಲಾಯಿತು. ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ ಶೇಖರ ಮೂರ್ತಿಯವರು

ನೀರಿಗೆ ಬಿದ್ದ ಐಫೋನ್ ಹುಡುಕಿಕೊಟ್ಟ ಮುಳುಗುತಜ್ಞ ಈಶ್ವರ್ ಮಲ್ಪೆ!

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್‍ನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ಅಂತಹ ಅಪಾಯಕಾರಿ ಬೇಸಿನ್‍ಗೆ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐ-ಫೆÇೀನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ. ಬೆಳಗ್ಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ-ಫೆÇೀನ್ ಮೊಬೈಲ್ ಜೆಟ್ಟಿ ಬಳಿ ಬೇಸಿನ್ನ ನೀರಿಗೆ

ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ಅಪಘಾತ : ಓರ್ವ ಮೃತ್ಯು

ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತ ಪಟ್ಟರೆ ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮೃತರನ್ನು ಮೂಡುಬಿದಿರೆ ಸಮೀಪದ ಬೆಳುವಾಯಿ ನಿವಾಸಿ ರಾಮಣ್ಣ ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗೆ ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು

ಬಿಎನ್‍ಐ 5ನೇ ವಾರ್ಷಿಕೋತ್ಸವ : “ಸೇವ್ ಟ್ರೀ ಸೇವ್ ಲೈಫ್” ಅಭಿಯಾನದಡಿ ಗಿಡನೆಡುವ ಯೋಜನೆ BNI INSPIRE MANGALORE

ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್ ವತಿಯಿಂದ ಮಂಗಳೂರು ನಗರದಾದ್ಯಂತ ಸೇವ್ ಟ್ರಿ ಸೇವ್ ಲೈಫ್ ಅಭಿಯಾನದ ಮೂಲಕ ವನಮಹೋತ್ಸವ ಕಾರ್ಯಕ್ರಮvu ಆಗಸ್ಟ್ 10ರಂದು ಬೆಳಿಗ್ಗೆ 11.30ಕ್ಕೆ ಮಣ್ಣಗುಡ್ಡೆಯ ವರ್ಟೆಕ್ಸ್ ಮ್ಯಾನೇಜ್ ಮಾರ್ಕೆಟ್‍ಸ್ಪೇಸ್‍ನಲ್ಲಿ ನಡೆಯಲಿದೆ.

ಸವಣೂರು : ತೆಂಗಿನಕಾಯಿ ಕೀಳುವಾಗ ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಸವಣೂರು : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ ಸುಚಿತ್ರ ರವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು.ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.ಮೃತರು ಪತಿ,

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತ ಮಂಗಳೂರು ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28). ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4

ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪ : ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ

ವಿಟ್ಲ : ಜನ್ಮದಿನೋತ್ಸವ, ಗ್ರಾಮೋತ್ಸವ-2023 ಗುರುವಂದನ-ಸೇವಾ ಸಂಭ್ರಮ

ತಾನು ಯಾರೆಂದು ಅರಿತು ಬಾಳಿದಾಗ ಅದು ನಿಜವಾದ ಬದುಕಾಗುತ್ತದೆ. ನಮ್ಮೊಳಗಿನ ಕೆಟ್ಟದ್ದನ್ನು ಬಿಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸವಾಗಬೇಕು. ಹಿರಿಯರಿಗೆ ಗೌರವ ಕೊಡುವ ಮನಸ್ಸು ನಮ್ಮದಾಗಬೇಕು. ಸನಾತನವನ್ನು ಮರೆಯದಿರೋಣ. ಹಿರಿಯರನ್ನು ಮರೆತರೆ ಅಪಾಯ ಖಂಡಿತ. ಜನ್ಮದಿನೋತ್ಸವದ ಆಚರಣೆ ರಾಷ್ಟ್ರೋತ್ತಾನಕ್ಕೆ ಮುನ್ನುಡಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಆ.8ರಂದು ಒಡಿಯೂರು ಶ್ರೀ

ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು

ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್