Home Archive by category Fresh News (Page 181)

ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು

ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ಬೈಂದೂರು – ಕಟ್ಟನಾಡಿ ಚಕ್ರಾನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ

ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬಾಳು ಕಟ್ಟಿನಾಡಿ ಚಕ್ರಾ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ಕೆಲಸ ನಡೆಯುತ್ತಿದ್ದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಪರಿಶೀಲನೆ ನಡೆಸಿದರು. ಹೊಳೆಯ ಪಕ್ಕದ ಜನರ ಬದುಕಿಗೆ ಹಲವು ವರ್ಷಗಳ ಕಾಲ ಸಂಕಷ್ಟದ ಸ್ಥಿತಿಯಿತ್ತು. ಶಾಲಾ ಮಕ್ಕಳು, ಹಳ್ಳಿಯ ನಾಗರಿಕರು, ಊರಿನ ಗ್ರಾಮಸ್ಥರು ಯಾವುದೇ ಕೆಲಸಕ್ಕಾದರೂ ಸುಮಾರು 5ರಿಂದ6 ಕಿ.ಮೀ ನಡೆದು ಅಪಾಯಕಾರಿ ಮರದ ಸೇತುವೆಯನ್ನು ದಾಟಿ ಬರಬೇಕಾದ ಕಠಿಣ

ಬಂಟ್ವಾಳ – ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ

ಮೂಲಭೂತ ಸೌಕರ್ಯ ವಂಚಿತ ಸರ್ಕಾರಿ ಶಾಲೆ

ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ

ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆ ಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು. ತಾ-07-08-2023 ನೇ ಸೋಮವಾರ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನ ದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 74 ವಯಸ್ಸಿನ ಶ್ರೀ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಯೆಯ್ಯಾಡಿಯಲ್ಲಿ ಪ್ರಚಾರಾಂದೋಲನಾ ಸಭೆ

ಕೇಂದ್ರ ಸರ್ಕಾರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು ನೇತೃತ್ವದಲ್ಲಿ ಆಗಸ್ಟ್ 9ರಂದು ಮಂಗಳೂರಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿಯಲ್ಲಿ ಪ್ರಚಾರಂದೋಲನಾ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ದೇಶದ ಎಲ್ಲ ಸಂಪತ್ತನ್ನು ಅಭಿವೃದ್ಧಿಯ ಹೆಸರಿನಲ್ಲಿ ದೇಶಿ ಮತ್ತು ವಿದೇಶಿ

ಕಾರ್ಕಳ : ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ: ಶುಭದರಾವ್ ಆರೋಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್ ನಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾರ್ಕಳ ಎರ್ಲಪಾಡಿಯ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮನ ಪಾರ್ಕ್ ನಿರ್ಮಾಣಗೊಂಡಿರುವ ಜಮೀನು, ಗೋಮಾಳದ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ : ಆಟಿಡೊಂಜಿ ದಿನದ ‘ಆಟಿದ ಅರಗಣೆ’

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ

ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್‍ಗೆ ರಾಜ್ಯದ ಆಯುಷ್ ಶೆಟ್ಟಿ ಸಾರಥ್ಯ

ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ

ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಟ್ರೆಶರ್ ಹಂಟ್, ಎಸ್ಕೆಪೀಡ್, ಪ್ಯಾಕ್ಮಾನ್, ವಿಭಾಗದಲ್ಲಿ ಹುಮೇರಾ ಆರಿಫ್, ಅಬ್ದುಲ್ ಕರೀಂ ಖತೀಜತುಲ್ ಮಕ್ಸೂದಾ, ರಿಫಾತ್ ಮರಿಯಮ್, ನೂಮನ್ ಷರೀಫ್, ಮುಸ್ಕಾನ್ ಮೊದಲನೇ ಹಾಗೂ ರಿಜ್ವಾನ್ ಮೊಹಮ್ಮದ್ ರಯಾನ್ ಮತ್ತು ಮೊಹಮ್ಮದ್ ಆರೀಫ್ ಎರಡನೇಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.