Home Archive by category Fresh News (Page 199)

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು ರಂಗಭೂಮಿಯಲ್ಲಿ ವಿಭಿನ್ನ ಪ್ರಯತ್ನವಾಗಿದ್ದು, ವಿನೂತನ ಶೈಲಿಯ ರಂಗ ವಿನ್ಯಾಸವನ್ನು ಹೊಂದಿದೆ. ಈ

ಪಡುಬಿದ್ರಿ : ಅಪಘಾತವಾದ ಕಾರನ್ನುಕಿಲೋ ಮೀಟರ್ ದೂರಕ್ಕೆ ಎಳೆದುಕೊಂಡು ಹೋದ ಟಿಪ್ಪರ್

ಟಿಪ್ಪರೊಂದರ ಹಿಂಭಾಗಕ್ಕೆ ಡಿಕ್ಕಿಯಾಗಿ ಸಿಲುಕಿಕೊಂಡ ಕಾರನ್ನು ಸುಮಾರು ಒಂದು ಕೀ.ಮೀ. ದೂರಕ್ಕೆ ಎಳೆದುಕೊಂಡೋದ ಘಟನೆ ಹೆಜಮಾಡಿ ಕನ್ನಾಂಗಾರಿನಲ್ಲಿ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ತಲೆ, ಕೈ, ಕಾಲು, ಮೂಗು ಸಹಿತ ದೇಹದ ಕೆಲ ಭಾಗಗಳಿಗೆ ಗಾಯಗೊಂಡ ಸಾಗರ ಮೂಲದ ಜಾಫರ್ ಖಾನ್, ಶಹೀನಾ ಹಾಗೂ ಯಾಸೀರ್ ಖಾನ್. ಇವರು ಸ್ಯಾಂಡ್ರೋ ಕಾರಿನಲ್ಲಿ ಸಾಗರದಿಂದ ಮಂಗಳೂರಿಗೆ ಹೋಗುತ್ತಿದ್ದು, ಪಡುಬಿದ್ರಿ ದಾಟಿ ಕನ್ನಾಂಗಾರಿನಲ್ಲಿ ಟಿಪ್ಪರ್ ಚಾಲಕ ತನ್ನ ವಾಹನವನ್ನು

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) (Oommen Chandy) ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ,  ಚಿಕಿತ್ಸೆ ಫಲಕಾರಿಯಾಗದೇ ಇಂದು(ಜುಲೈ 18) ಕೊನೆಯುಸಿರೆಳೆದಿದ್ದಾರೆ. .

ಕಡಬ : ಒಂದುವರೆ ವರ್ಷಗಳ ನಂತರ ಕಳ್ಳತನದ ಆರೋಪಿಗಳ ಬಂಧನ

ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.ಈತನ ಮೊಬೈಲ್ ಸಿಡಿಆರ್

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಯಕ್ಷಾರ್ಚನೆ

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ

ಅದ್ಯಪಾಡಿ : ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್‍ನ ಭಕ್ತಿ ಗೀತೆಗಳ ಲೋಕಾರ್ಪಣೆ

ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗೆಗೆ ತುಳು ಭಕ್ತಿ ಗೀತೆಯು ಬಿಡುಗಡೆಗೊಂಡಿತು. ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಲಕ್ಷ್ಮೀ ನಾರಾಯಣ ಅಸ್ರಣ್ಣರು

ಜುಲೈ 18ರಂದು : ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ. ಇದರಿಂದ ಸ್ಥಳೀಯರ ನಾಗರಿಕೆರಿಗೆ, ವ್ಯಾಪಾರಸ್ತರಿಗೆ, ವಾಹನ ಚಾಲಕರಿಗೆ ಅಂಬ್ಯುಲೆನ್ಸ್,

ವಿದ್ಯಾಗಿರಿಯಲ್ಲಿ ವೈವಿಧ್ಯಮಯ ಹಣ್ಣುಗಳ ಮೇಳ ಸಮಾಪನ

ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು ಸಮಾಪನಗೊಂಡಿತ್ತು. ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ