Home Archive by category Fresh News (Page 313)

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ

ಪಿಕಪ್ ಕಳವು: ಅಂತರಾಜ್ಯ ವಾಹನ ಚೋರನ ಬಂಧನ

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪವಿತ್ರವಾದ ರಂಜಾನ್ ಇಫ್ತಾರ್ ಸಂಗಮ

ಮಂಜೇಶ್ವರ : ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ಮಂಜೇಶ್ವರ ಝೋನಲ್ ಸಮಿತಿಯ ವತಿಯಿಂದ ಹೊಸಂಗಡಿ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಪವಿತ್ರವಾದ ರಂಝಾನ್ ಇಫ್ತಾರ್ ಸಂಗಮ ಹಮ್ಮಿಕೊಳ್ಳಲಾಯಿತು. ಖ್ಯಾತ ವಿದ್ವಾಂಸ ಮುಜಾಹಿದ್ ಬಾಳುಶ್ಯೇರಿ ಯವರು “ನಾಳೆಗಾಗಿ ಸಿದ್ಧರಾಗಿ” ಎಂಬ ವಿಷಯದ ಕುರಿತು ಪ್ರವಚನ ನೀಡಿದರು. ರಂಜಾನ್ ತಿಂಗಳಲ್ಲಿ ಧರ್ಮದ ಹೆಸರಿನಲ್ಲಿ ವಿಶ್ವಾಸಿಗಳನ್ನು ವಂಚಿಸಿ ಹಣ ಸಂಪಾದಿಸಲು ಬಯಸುವ ಮೋಸದ ಪುರೋಹಿತರ ಬಗ್ಗೆ ವಿಶ್ವಾಸಿಗಳು ಹೆಚ್ಚು

ನಾನು ಟಿಕೆಟ್ ಆಕಾಂಕ್ಷಿಯಲ್ಲ : ಕ್ಯಾ. ಗಣೇಶ್ ಕಾರ್ಣಿಕ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು

ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣೆ

ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್‍ನ ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಎನ್‍ಎಸ್‍ಎಸ್ ಸ್ವಯಂ ಸೇವಕರಾದ ಎಂ.ಎಸ್. ಝೀಭಾ ಅವರು ಸ್ವಾಗತ ಭಾಷಣ ಮಾಡಿದರು. ಎಂ.ಎಸ್. ಫಾತಿಮತ್ ಇಶಾನ ಅವರು ವಾರ್ಷಿಕ ವರದಿ ವಾಚಿಸಿದರು.

ಕಾವೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಸಬಲೀಕರಣ ಗೃಹ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಕಾವೂರಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಸುಮಂತ್ ರಾವ್ ಉಚಿತ ಅರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.ಕಾವೂರು ವ್ಯವಸಾಯ ಸೇವಾ

ಚರ್ಚ್‍ಗಳಲ್ಲಿ ಶ್ರದ್ಧಾ ಭಕ್ತಿಯ ಶುಭ ಶುಕ್ರವಾರ ಆಚರಣೆ

ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್‍ಗಳಲ್ಲಿಯೂ ಗುಡ್ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುತ್ತೂರಿನ ಮಾಯಿದೆ ದೇವುಸ್ ಚರ್ಚ್, ಮರೀಲಿನ ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರಿನ ಸಂತ ಅಂತೋನಿ ಚರ್ಚ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ, ಬೆಳ್ಳಾರೆ ಚರ್ಚ್ ಸಹಿತಿ

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ದೂರುಗಳಿಗೆ ಸಿ-ವಿಜಲ್ ಉಪಯುಕ್ತ

ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತ ದೂರುಗಳನ್ನು ದಾಖಲಿಸಲು ಕೇಂದ್ರ ಚುನಾವಣಾ ಆಯೋಗ (ಇಸಿಐ) ಅಭಿವೃದ್ಧಿ ಪಡಿಸಿದ ಸಿ-ವಿಜಲ್ ಆಪ್ ಅತ್ಯಂತ ಉಪಯುಕ್ತ ಎಂದು ಜಿಲ್ಲಾ ಐಟಿ ನೋಡಲ್ ಅಧಿಕಾರಿ ಡಾ. ಬಸವರಾಜ್ ತಲ್ವಾರ್ ಹೇಳಿದರು.ಅವರು ಏ.7ರ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಿ-ವಿಜಲ್ ಆಪ್ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರದಲ್ಲಿ ಮಾತನಾಡಿದರು.ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ(ಎಂಸಿಸಿ)ಯ ಉಲ್ಲಂಘನೆಯ

ಅಂಗಾರ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ

ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನವಿ ತಪ್ಪ