Home Archive by category Fresh News (Page 314)

ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಚ್ಚರಿ : ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ ಗಂಧದ ಕಡ್ಡಿಯ ಹೊಗೆ

ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಜಾತ್ರೆ ಮಹೋತ್ಸವ : ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ

ಕೊಲ್ಲೂರು : ವ್ಯಕ್ತಿ ನಾಪತ್ತೆ

ಬೈಂದೂರು: ದಿನಾಂಕ 5/4/ 2023 ರಂದು ರಾತ್ರಿ 8.30 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ವೆಂಕಟರಾಮಪ್ಪ ವಯಸ್ಸು 55 ತಂದೆ: ದಿವಂಗತ ರಾಮಪ್ಪ ಎಂಬುವರು ದೇವಸ್ಥಾನಕ್ಕೆ ಹೊರಟು ಅಲ್ಲಿ ದಿನಾಂಕ 6/4/ 2023 ರಂದು ಲಲಿತಾಂಬಿಕಾ ಗೆಸ್ಟ್ ಹೌಸಿನಲ್ಲಿ ಉಳಿದುಕೊಂಡವರು ಬೆಳಗಿನ ಜಾವ ನಾಲ್ಕು ಗಂಟೆಗೆ ಬಹಿರ್ದೆಸೆಗೆ ಎಂದು ಹೋದವರು ನಾಪತ್ತೆಯಾಗಿರುತ್ತಾರೆ ಎಂದು ಅನಿಲ್ ಕುಮಾರ್ ರವರು ಕೊಲ್ಲೂರು ಠಾಣೆಗೆ ಲಿಖಿತ ದೂರು

ಶಿಕ್ಷಕ ಪ್ರಸನ್ನ ಶೆಣೈಗೆ ಕಾಯಕ ಬಸವಶ್ರೀ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸೃಷ್ಟಿ ಸಂಸ್ಥೆ (ರಿ) ಬೆಂಗಳೂರು ಇವರು ಮೂಡುಬಿದಿರೆಯ ಶಿಕ್ಷಕ ಪ್ರಸನ್ನ ಶೆಣೈ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಕಾಯಕ ಬಸವ ಶ್ರೀ ಪ್ರಶಸ್ತಿ- 2023 ಗೆ ಆಯ್ಕೆ ಮಾಡಿದ್ದಾರೆ.21 ಸಲ ರಕ್ತದಾನ. 2 ರಕ್ತದಾನ ಶಿಬಿರ 2 ಸಲ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ 150 ಕ್ಕಿಂತ ಅಧಿಕ ಗಿಡ ನೆಟ್ಟು ಬೆಳೆಸಿದ್ದು ಮೂಡುಬಿದರೆ ಸಹಿಪ್ರ ಶಾಲೆ ಜ್ಯೋತಿನಗರದಲ್ಲಿ ಮಿಯವಾಕಿ ಮಾದರಿಯಲ್ಲಿ ನಗರ

ಆಮ್ ಆದ್ಮಿ ಪಕ್ಷದಿಂದ ರಾಷ್ಟ್ರಾದ್ಯಂತ ಸ್ಪರ್ಧೆ : ದ.ಕ.ಜಿಲ್ಲೆಯ 5 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ

ಮೂಡುಬಿದರೆಯಲ್ಲಿ ತುಳು ಮಹಾಕೂಟ-2023ಕ್ಕೆ ಚಾಲನೆ

ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ

ವಸತಿ ರಹಿತರಿಗೆ ಪ್ಲಾಟ್ ಹಸ್ತಾಂತರ : ಕೇರಳ ಸರ್ಕಾರದ ಮಹತ್ವದ ಯೋಜನೆ

ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ ವಸತಿ ಸಮುಚ್ಚಯಗಳು ಕಣ್ಣೂರು ಜಿಲ್ಲೆಯ ಕದಂಪುರ್, ಕೊಲ್ಲಂ ಜಿಲ್ಲೆಯ ಪುನಲೂರ್, ಕೊಟ್ಟಾಯಂ ಜಿಲ್ಲೆಯ ವಿಜಯಪುರಂ ಮತ್ತು ಇಡುಕ್ಕಿ ಜಿಲ್ಲೆಯ ಕರಿಮಣ್ಣೂರಿನಲ್ಲಿವೆ. ಪ್ರತಿ ವಸತಿ ಸಮುಚ್ಚಯ ನಿರ್ಮಿಸಲು 6.7 ಕೋಟಿಯಿಂದ 7.85 ಕೋಟಿ ವೆಚ್ಚ ಮಾಡಲಾಗಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ

ಪಿಕಪ್ ಕಳವು: ಅಂತರಾಜ್ಯ ವಾಹನ ಚೋರನ ಬಂಧನ

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.