Home Archive by category Fresh News (Page 319)

ಪರೀಕ್ಷಾ ಮುನ್ನಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ

ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಮಂಜುನಾಥ ಶೆಟ್ಟಿ ಅವರ ಪತ್ರ ಅದ್ವೆತ್ ಶೆಟ್ಟಿ ಮೃತಪಟ್ಟ ಬಾಲಕ, ಈತ ಕಡಬ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢ

ನೆಲ್ಯಾಡಿ ಡಿವೈಡರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿ ತಾಯಿ ಮೃತ್ಯು – ತಂದೆ, ಮಗ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಕಾರೊಂದು ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(ವ.50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ

ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ

ಮಂಗಳೂರು,ಮಾ.29(ಕ.ವಾ):- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ನೇಣಿಗೆ ಶರಣು

ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ( 49 ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮನೆಯಲ್ಲಿ ಮಹಿಳೆಯ ಗರ್ಭಿಣಿ ಮಗಳು ಇದ್ದು ಅವರು ಮಲಗಿದ್ದರು. ಬೆಳಿಗ್ಗೆ 8.30ರ ವೇಳೆಗೆ ಮಗಳು

ಉಳ್ಳಾಲ : ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ : ಹೆಡೆಮುರಿ ಕಟ್ಟಿದ್ದ ಪೊಲೀಸರು

ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ದೇಶದಲ್ಲೇ ಅತ್ಯಂತ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಧರ್ಮದೇವತೆಗಳು ರಕ್ಷಕರಾದರೆ ಕ್ಷೇತ್ರಕ್ಕೆ ಬರುವ ಭಕ್ತರನ್ನು ರಕ್ಷಿಸಿ, ಅಧರ್ಮಕ್ಕೆ ಶಿಕ್ಷೆಯನ್ನು ವಿಧಿಸುವವರು ಪೊಲೀಸರು. ಧರ್ಮ ಸಂಸ್ಥಾಪನೆಗೆ ನಿರ್ಭಿತ ವಾತಾವರಣ ಸೃಷ್ಟಿಯಾದಲ್ಲಿ ಆ ದೇಶ

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ ಬೆಂಗಳೂರು; ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ನಿಂದ ಐಐಎಫ್ಎಲ್ ಜಿತೋ “ಅಹಿಂಸಾ ಓಟ” ಆಯೋಜಿಸಲಾಗಿದೆ. ಶಾಂತಿ – ಸೌಹಾರ್ದತೆ ಸ್ಥಾಪನೆಯ ಮಹತ್ವಾಕಾಂಕ್ಷೆಯೊಂದಿಗೆ ಗಿನ್ನೆಸ್ ದಾಖಲೆ ಸ್ಥಾಪಿಸುವ ಓಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಲಿದ್ದಾರೆ. ಈ ಮೂಲಕ

ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ

ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸನ್ಮಾನ ಮಾಡಿ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.