Home Archive by category Fresh News (Page 325)

ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ

ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸನ್ಮಾನ ಮಾಡಿ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ರೆಂಜಿಲಾಡಿಯ ಯೋಧ ಲಿಜೇಶ್ ಕುರಿಯನ್ ನಿಧನ

ಕಡಬ: ಹೃದಯಾಘಾತದಿಂದ ಕೊಯಂಬತ್ತೂರಿನಲ್ಲಿ ನಿಧನರಾದ ಕಡಬ ತಾಲೂಕಿನ ರೆಂಜಿಲಾಡಿಯ ಯೋಧನಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ಅಂತಿಮ ಗೌರವ ಸಲ್ಲಿಸಿ ಅಂತಿಮ ಕಾರ್ಯ ನೆರವೇರಿಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತರಪ್ಪೇಳ್ ನಿವಾಸಿ ಮಾಜಿ ಯೋಧ ಜೋನಿ ಟಿ.ಕೆ. ಅವರ ಪುತ್ರ ಚೆನೈ ರಿಜಿಮೆಂಮಟ್ನ ಕೊಲ್ಕತ್ತಾ ಘಟಕದಲ್ಲಿ ಯೋಧರಾಗಿದ್ದ ಲಿಜೇಶ್ ಕುರಿಯನ್ (30) ಮಾ.26 ರಂದು ಚೆನೈನ ಕೊಯಂಬತ್ತೂರುನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಂದೆ, ತಾಯಿ,

ಸುರತ್ಕಲ್‍ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ.

`ಮತ್ತಾವಿಗೆ ಮತ್ಯಾವಾಗ ಸೇತುವೆ’ ವಿಶೇಷ ವರದಿಗೆ ಪತ್ರಕರ್ತ ನರೇಂದ್ರ ಮರಸಣಿಗೆ ಅವರಿಗೆ ಪ.ಗೋ. ಪ್ರಶಸ್ತಿ

ಮಂಗಳೂರು: ನಗರದ ಪತ್ರಿಕಾಭವನದಲ್ಲಿ ನಡೆದ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿತ್ತು. ನರೇಂದ್ರ ಅವರ ಮತ್ತಾವಿಗೆ ಮತ್ಯಾವಾಗ ಸೇತುವೆ' ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10

ನಗರದ ಬೊಂದೆಲ್ ನಲ್ಲಿ ಸರ್ವಜ್ಞ ವೃತ್ತ ನಿರ್ಮಾಣ – ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಮುತುವರ್ಜಿಯಿಂದ ಬೊಂದೆಲ್ ಬಳಿ ನಿರ್ಮಾಣವಾದ ಸರ್ವಜ್ಞ ವೃತ್ತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮುಡಾ ವತಿಯಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿದೆ. ರವಿಶಂಕರ್ ಮಿಜಾರ್ ನೇತೃತ್ವದಲ್ಲಿ ಕೆಲಸ ಆಗಿದೆ. ಕೆರೆ ಅಭಿವೃದ್ಧಿಗೆ ಅನುದಾನ ಕೊಟ್ಟು ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು. ಪಾರ್ಕ್

ಚುನಾವಣೆ ಹಿನ್ನೆಲೆ; ರಾ.ಹೆದ್ದಾರಿಗಳಲ್ಲಿ ಸಾಗುತ್ತಿರುವ ವಾಹನಗಳ ತಪಾಸಣೆ

ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ

ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕನಿಗೆ ಢಿಕ್ಕಿ, ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!” : ಶಾಸಕ ಡಾ.ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ