Home Archive by category Fresh News (Page 377)

ಕೊಲ್ಯ : ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವು

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ.

ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆ

ಸುಳ್ಯ:ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ‌ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ತಹಶೀಲ್ದಾರ್ ನೇಮಕ ಆದೇಶ ಇನ್ನಷ್ಟೇ ಆಗಬೇಕಾಗಿದೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರ

ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆವರ್ಗಾವಣೆಯಾಗಿದೆ.ಸುಳ್ಯ ವೃತ್ತ ನಿರೀಕ್ಷಕರಾಗಿ ಅಂಕೋಲದಲ್ಲಿ ಸರ್ಕಲ್ಇನ್‌ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಎಂಬವರು ಬರಲಿದ್ದಾರೆ ಎಂದು

ಅನಾರೋಗ್ಯ ಪೀಡಿತರಿಗೆ ನೇತಾಜಿ ಬ್ರಿಗೇಡ್ ನಿಂದ ಸಹಾಯಹಸ್ತ

ಮೂಡುಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 10ನೇ ಸೇವಾ ಯೋಜನೆಯ ಅಂಗವಾಗಿ ಮೂಡುಬಿದಿರೆಯ ಶ್ರೀ ಪುರಾತನ ಆದಿಶಕ್ತಿ ಮಹಾದೇವಿ ದೇವಸ್ಥಾನದಲ್ಲಿಎರಡು ಕುಟುಂಬಗಳಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು”ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೂಡುಬಿದಿರೆಯ ಶ್ರೀಯಾ ಎಂಬ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಮತ್ತು ಬಂಟ್ವಾಳದಲ್ಲಿ ಪುಟಾಣಿ ಮಕ್ಕಳಾದ ರಶ್ಮಿತ್ ಹಾಗೂ ಶ್ರದ್ಧಾ ಎಂಬುವರ ಶ್ರದ್ಧಾಶ್ರಯ ಮನೆ ನಿರ್ಮಾಣಕ್ಕೆ” ತಲಾ

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೋಷಿತ ಸಮುದಾಯವನ್ನು ಮತ್ತಷ್ಟು ಶೋಷಿಸುವ ಕಾರ್ಯಕ್ಕೆ ಶಾಸಕರು ಮುಂದಾಗಿದ್ದಾರೆ: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಎಸ್.ವೈ ಗುರುಶಾಂತ್

ಬೆಳ್ತಂಗಡಿ; ಆದಿವಾಸಿವಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ ಮೂಲನಿವಾಸಿ ಮಲೆಕುಡಿಯರ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ

ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್‍ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಪುತ್ತೂರು ಅಮರ್ ಕಾಂಪ್ಲೆಕ್ಸ್‍ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ರಾಜ್ಯ

ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.ಕಾರ್

ಕಾರ್ಕಳದಲ್ಲಿ ನಡೆದ ಪಂಜಿನ ಪೊಲೀಸ್ ಕವಾಯತು

ಕಾರ್ಕಳ: ರಾಜ್ಯದ ಪ್ರಮುಖ ನಗರವಾದ ಮೈಸೂರು ಹಾಗೂ ಬೆಂಗಳೂರಿಗೆ ಸೀಮಿತವಾಗಿದ್ದ ಪೊಲೀಸ್ ಕವಾಯತು ಕಾರ್ಕಳದಲ್ಲಿ ನಡೆಯುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು . ಅವರು ಸ್ವರಾಜ್ ಮೈದಾನದಲ್ಲಿ ನಡೆದ ವಿಶ್ವವಿಖ್ಯಾತ ಬೈಲೂರಿನ ಪರಶುರಾಮ ಧಿಂ ಪಾರ್ಕ್ ಲೋಕಾರ್ಪಣೆಗೆ ಪ್ರಯುಕ್ತ ಪೊಲೀಸ್ ಇಲಾಖೆ ಶ್ರೀ ಭುವನೇಂದ್ರ ಕಾಲೇಜು ಇವರ ಸಹಯೋಗದಲ್ಲಿ ನಡೆದ ಆಕರ್ಷಕ ಪಂಜಿನ ಕವಾಯತು ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಸಾಂಸ್ಕೃತಿಕತೆ ಜನತೆಗೆ ಎಲ್ಲ ಆಯಾಮಗಳಲ್ಲಿನ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಸಮಿತಿ ಸಭೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಇದರ ಶತಮಾನೋತ್ಸವ ಕಾರ್ಯ ಯೋಜನೆಯ ಅಂಗವಾಗಿ ಶತಮಾನೋತ್ಸವ ಸಮಿತಿ ಸಭೆ ನಡೆಸಲಾಯಿತು.           ಮುಖ್ಯ ಅತಿಥಿಯಾಗಿ ಆಗಮಿಸಿದ ಹೇರಂಬ ಇಂಡಸ್ಟ್ರೀಸ್ ನ ಮುಖ್ಯಸ್ಥ, ಕೊಡುಗೈ ದಾನಿ, ಕುಳೂರು ಶಾಲಾ ಹಳೆ ವಿದ್ಯಾರ್ಥಿಯೂ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರ ಮುಂದಾಳತ್ವದಲ್ಲಿ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ