Home Archive by category Fresh News (Page 387)

ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನ : ಜ.25ರಂದು ಕಾಲಮಿತಿ ಯಕ್ಷಗಾನ ಬಯಲಾಟ ಪ್ರದರ್ಶನ

ಬೈಂದೂರಿನ ಬಾಳಿಕೆರಿ ದೇವಲ್ಕುಂದ ಹೊಸಿ ಹೈಗುಳಿ ಚಿಕ್ಕು ಸಹಪರಿವಾರಗಳ ದೈವಸ್ಥಾನದಲ್ಲಿ ಹಾಲುಹಬ್ಬದ ಪ್ರಯುಕ್ತ ದಿ.ಅಕ್ಕಯ್ಯ ಶೆಡ್ತಿ ಮಕ್ಕಳು ಸೊಸೆ, ಮೊಮ್ಮಕ್ಕಳು ಜನ್ನಾಲ್ ಗೋಳಿಮನೆ ಕಬೈಲ್ಮನೆ ಇವರ ವತಿಯಿಂದ ಜನವರಿ 25ರಂದು ಕಾಲಮಿತಿ ಯಕ್ಷಗಾನ ಬೈಲಾಟ ನಡೆಯಲಿದೆ. ರಾತ್ರಿ 7.30ರಿಂದ ಬೆಂಕಿನಾಥೇಶ್ವರ ದಶಾವತರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಬಾಳ ಕಳವಾರು

ಬೈಂದೂರಿನ ವತ್ತಿನಣಿ ಅರಣ್ಯ ಪ್ರದೇಶದಲ್ಲಿ ಪ್ಲಾಂಟೇಶನ್‍ಗೆ ಬೆಂಕಿ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನಣಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆ ಗೆ ಸಂಬಂಧಿಸಿದ ಪ್ಲಾಂಟೇಶನಿಗೆ ಬೆಂಕಿ ತಗುಲಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.

ಏಷ್ಯಾದ ಅತಿದೊಡ್ಡ ಕಲಾ ಸಂಭ್ರಮ, ಬಾಂಗ್ಲಾದೇಶದ 19ನೇ ಏಷ್ಯಾನ್ ಆರ್ಟ್ ಬಿಯೆನ್ನಲ್

ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್‍ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ ಆಯ್ಕೆಯಾಗಿದ್ದಾರೆ.ಈ ಏμÁ್ಯದ ಅತಿದೊಡ್ಡ ಕಲಾ ಸಂಭ್ರಮದ 19ನೇ ಆವೃತ್ತಿಯನ್ನು ಮೂಲತಃ 2020ಕ್ಕೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದನ್ನು ಬಾಂಗ್ಲಾದೇಶ ಸಾಂಸ್ಕøತಿಕ ವ್ಯವಹಾರಗಳ

ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ನಿಧನ

ಕನ್ನಡ ರಂಗಭೂಮಿಯ ಖ್ಯಾತ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲಕೃಷ್ಣ ನಾಯರಿಯವರು ಸನ್ಮಾನಗೊಳ್ಳಬೇಕಾಗಿತ್ತು. ಆದರೆ ವಿಧಿವಶರಾಗಿದ್ದಾರೆ. ಉಡುಪಿಯ ಸಾಲಿಗ್ರಾಮದ ಕಾರ್ಕಡ ನಿವಾಸಿಯಾಗಿರುವ ಗೋಪಾಲಕೃಷ್ಣ ನಾಯರಿಯವರು ಅನಾರೋಗ್ಯದಿಂದ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ

ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ

ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎಲ್ಲ

ಕಡಬದ ಹಳೆನೇರಂಕಿ ಗ್ರಾಮದ ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಜಾತ್ರೋತ್ಸವ

ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ, ವಾದ್ಯದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೈವಸ್ಥಾನದ ಸನ್ನಿಧಿಗೆ ಆಗಮಿಸಿತು. ಗ್ರಾಮಸ್ಥರು ಅಡಿಕೆ, ತೆಂಗು, ಸಿಯಾಳ, ಹಿಂಗಾರ, ಬಾಳೆಗೊನೆ ಸೇರಿದಂತೆ ವಿವಿಧ ತರಕಾರಿ

ಜ. 13- 17ರ ವರೆಗೆ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಆಶಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಜನವರಿ 13ರಿಂದ 17ರ ವರೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದು, ವಿಶಾಲವಾದ ಕ್ರೀಡಾಂಗಣದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿದೆ. ರಾಷ್ಟ್ರಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಗೆ ಸಕಲ ಸಿದ್ಧತೆಗಳು

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್.ಕೆ,ಉಪಾಧ್ಯಕ್ಷರಾಗಿ ಬಂಟ್ವಾಳ

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ ಇಡೀ ಮೆಸ್ಕಾಂ ಜನಸಾಮಾನ್ಯರಿಗೆ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಬಹಳ ಸಂತೋಷ ತಂದಿದೆ. ತಮಿಂದ ಇಡೀ ಮೆಸ್ಕಾಂ ವ್ಯಾಪ್ತಿಯಲ್ಲಿ ಒಳ್ಳೆಯದಾಗಲಿ.ಎಂದು ಶುಭಹಾರೈಸಿದರು ಜಿಲ್ಲಾಧ್ಯಕ್ಷರಾದ ಕುಶಾಲ್

ಆಲೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಾನಪದ ಸಂಗೀತ ಕಾರ್ಯಕ್ರಮ

ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಈ ದ್ಯಾವಪ್ಪ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ,