Home Archive by category Fresh News (Page 428)

ಹವಾಮಾನ ವೈಪರೀತ್ಯ; ಆರೋಗ್ಯ ಇಲಾಖೆಯಿಂದ ರಾಜ್ಯದ ಜನತೆಗೆ ಮಾರ್ಗಸೂಚಿ ಪ್ರಕಟ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಈ ರೀತಿಯ ವಾತಾವರಣದಲ್ಲಿ ಹೆಚ್ಚಾಗಿ

ಸುಳ್ಯದಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಮರ್ಶಕ ವಿಜಯಶಂಕರ ಸಮ್ಮೇಳನವನ್ನು ಉದ್ಘಾಟಿಸಿದರು.

ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ

ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನ ದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕಿ ಹಾಗೂ ಶ್ರೀ ದೇವರ ರಜತ ಪೀಠ ಪ್ರಭಾವಳಿಗಳನ್ನು ಶ್ರೀದೇವರಿಗೆ ಹತ್ತು ಸಮಸ್ತರ ಪರವಾಗಿ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಸುಮಾರು 28ಕಿಲೋ ಬೆಳ್ಳಿಯನ್ನು ಬಳಸಲಾಗಿದ್ದು , 25 ಲಕ್ಷ ವೆಚ್ಚ ತಗಲಿದ್ದು ಶ್ರೀದೇವಳದ ವೈದಿಕರಿಂದ ವಿಧಿ ವಿಧಾನಪೂರ್ವಕ ಪೂಜೆನಡೆದು

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ

ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಮೃತ್ಯು

ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಶಿಬಿರ.

ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಕಾರ್ಯಕ್ರಮ ಪುಷ್ಯ ನಕ್ಷತ್ರದ ದಿನ 12-12-2023 ರಂದು ಜರುಗಿತು.ಮಠಾಧಿಪತಿಗಳಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಮಕ್ಕಳ ಸ್ವಾಸ್ಥ್ಯ ರಕ್ಷಣೆಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 16 ವರ್ಷದ ವರೆಗಿನ ಮಕ್ಕಳಿಗಾಗಿ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು ಸುವರ್ಣ ಪ್ರಾಶನ ಶಿಬಿರ ಜರುಗಲಿದೆ.. ಇಲ್ಲಿನ ವೈದ್ಯಕೀಯ ಸೇವಾ ವಿಭಾಗದ ಆಯುರ್ವೇದ ತಜ್ಞ ವೈದ್ಯ

ಡಿ .16 ಮಂಗಳೂರಿನ ಕೆಲವೆಡೆ  ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುರ್ತಾಗಿ ಪೈಪ್ ಲೈನ್ ಕಾಮಗಾರಿ ನಡೆಯಲಿದೆ. ಹೀಗಾಗಿ ಮಂಗಳೂರು ನಗರದ ವಿವಿಧೆಡೆ ಭಾನುವಾರ ಡಿ .16 ರ ಮುಂಜಾನೆಯಿಂದ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ತುಂಬೆ ಹೆಚ್ ಎಲ್ ಪಿ ಎಸ್ ರೇಚಕ ಸ್ಥಾವರದಿಂದ ಪಣಂಬೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯೂ ಬಿಜೈ ಚರ್ಚ್ ರೋಡ್ ಬ್ರಿಡ್ಜ್ ಬಳಿ , ಕೂಳೂರು ಸೇತುವೆ ಬಳಿ, ಎಂ ಸಿ ಎಫ್ ಬಳಿ ನೀರು ಸೋರಿಕೆ ಉಂಟಾಗಿರುವ ಹಿನ್ನೆಲೆ ತುರ್ತಾಗಿ […]

ಮಂಗಳೂರು : ಡಿ. 14ರಂದು ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ

ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಮೂಲಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಡಿ. 14ರ ಪೂ.11ಕ್ಕೆ ರಾಜ್ಯಾದ್ಯಂತ ವರ್ಚ್ಯುವೆಲ್ ಮಾಧ್ಯಮದ ಮೂಲಕ 100 ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡುವರು. ಅದರಂತೆ ದ.ಕ.ಜಿಲ್ಲೆಯ ಸೂಟರ್‌ಪೇಟೆ, ಬೋಳಾರ, ಬಂದರು, ಪಚ್ಚನಾಡಿ, ಕೋಡಿಕಲ್, ಮೀನಕಳಿಯ, ಕೆರೆಬೈಲು,

ಎಸ್.ಡಿ.ಎಂ ಕೆಮಿಸ್ಟ್ರಿ ವಿಭಾಗದ ಕಾಂಕೆಮ್ ಚಟುವಟಿಕೆಗಳಿಗೆ ಚಾಲನೆ

ಉಜಿರೆ, ಡಿ.12: ವೈಜ್ಞಾನಿಕ ವಲಯವನ್ನು ಪ್ರತಿನಿಧಿಸುವ ಯುವ ಪ್ರತಿಭಾನ್ವಿತರು ಔದ್ಯಮಿಕ ಕ್ಷೇತ್ರದ ಸಾಧ್ಯತೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಯೋಗಶೀಲ ಹೆಜ್ಜೆಗಳನ್ನಿರಿಸಿ ಯಶಸ್ಸು ಸಾಧಿಸುವ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಯುವರಸಾಯನಶಾಸ್ತ್ರಜ್ಞರ ವೇದಿಕೆಯಾದ

ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ| A.J. Hospital & Research Centre

ಎ.ಜೆ. ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಸಹಜ ಉಸಿರಾಟಕ್ಕೆ ಅಪರೂಪದ ಶಸ್ತ್ರ ಚಿಕಿತ್ಸೆ. 24 ದಿನ ಪ್ರಾಯದ ನವಜಾತ ಶಿಶುವನ್ನು ಸ್ತನ್ಯಪಾನ ಮತ್ತು ಉಸಿರಾಟದ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಉಸಿರಾಡಲು ಕಷ್ಟಪಡುತ್ತಾ ಶ್ವಾಸೋಚ್ಛಾಸ ಮಾಡುವಾಗ, ಎದೆಹಾಲು ಕುಡಿಯುವಾಗ ಮೈ ನೀಲಿ ವರ್ಣಕ್ಕೆ ತಿರುಗುತ್ತಿತ್ತು. ಪರಿಸ್ಥಿತಿ ಗಂಭೀರವಿದ್ದುದರಿಂದ ನಗರದ ಏಕೈಕ ನವಜಾತ ಶಿಶುಗಳ ಹೃದಯ ತಜ್ಞರಾದ ಪ್ರಸ್ತುತ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.