ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಇಡ್ಯಾದ ಗುಡ್ಡೆಕೊಪ್ಲ ನಿವಾಸಿ ಲೋಕೇಶ್ ಕುಂದರ್ ಅವರು ಕಳೆದ ಡಿಸೆಂಬರ್ ನಲ್ಲಿ ಮನೆಯ ಬಳಿಯ ಸಮುದ್ರ ತೀರದಲ್ಲಿ ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ಯೂಬ್ ಹತೋಟಿ ತಪ್ಪಿ ದೂರ ಸರಿದು ನೀರಿಗೆ ಹಾಕಿದ ಬಲೆ ಕಾಲಿಗೆ ಸಿಲುಕಿ ಈಜಾಡಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಆ
ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.
Mangalore: College of Aviation Studies, Srinivas University had conducted virtual World Environment Day for BBA(Aviation Management)/(Aviation and Logistic Management)/(Aviation,Travel and Tourism Management ) Students as a part of off-stage event on Saturday 5th June 2021 World Environment Day was celebrated at Srinivas University College of Aviation Studies , on
ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕರೋನಾ ವಿರುದ್ಧ ಹೋರಾಟ
ಕುಂದಾಪುರ: ಯಡಮೊಗೆ ಸಾಮಾಜಿಕ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಖೇದಕರ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ರಾತ್ರಿ ಸಾಮಾಜಿಕ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಶಂಕರನಾರಾಯಣ ಪೊಲೀಸರು
ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಏವಿಯೇಷನ್ ಸ್ಟಡೀಸ್‌ನ ಬಿಬಿಎ ಏವಿಯೇಶನ್ ಮ್ಯಾನೇಜ್‌ಮೆಂಟ್, ಏವಿಯೇಶನ್ ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್ ಮತ್ತು ಏವಿಯೇಶನ್ ಟ್ರಾವೆಲ್ ಮತ್ತು ಟೂರಿಸಂ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೀಡಿಯೋ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ಎನ್‌ಎಸ್‌ಎಸ್ ಹಾಗೂ ಸಮಾಜಸೇವಾ ವಿಭಾಗದ ವತಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಶ್ವ
ಶ್ರೀನಿವಾಸ ವಿಶ್ವವಿದ್ಯಾಲಯ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ವರ್ಚುವಲ್ ವೇದಿಕೆಯ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಬಿ.ಕಾಂ. ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾಪಾಡುವುದು, ಸಸಿಗಳನ್ನು ನೆಡುವುದನ್ನು ವೀಡಿಯೋ ಮಾಡಲು ವಿದ್ಯಾರ್ಥಿಗಳಿಗೆ
ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ
ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ
ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.