Home Archive by category Fresh News (Page 431)

ಮೂಡುಬಿದರೆಯಲ್ಲಿ ಸ್ಕೌಟ್ಸ್& ಗೈಡ್ಸ್ ಅಂತರಾಷ್ಟ್ರೀಯ ಜಾಂಬೂರಿಗೆ ಭರದ ಸಿದ್ಧತೆ

ಮೂಡುಬಿದರೆ ಆಳ್ವಾಸ್ ಕ್ಯಾಂಪಸ್‍ನಲ್ಲಿ ಡಿಸೆಂಬರ್ 21ರಿಂದ 27ರ ವರೆಗೆ ನಡೆಯಲಿರುವ ಸ್ಕೌಟ್ಸ್ & ಗೈಡ್ಸ್‍ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವಾ ಅವರು ವಿವರ ನೀಡಿದರು. ಇದೇ ಮೊದಲ ಬಾರಿಗೆ ಭಾರತದಲ್ಲಿ ಆಯೋಜನೆ ಮಾಡಲಾಗಿರುವ ಸ್ಕೌಟ್ಸ್

ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ನಟ ಶಿವರಾಜ್‍ಕುಮಾರ್ ಕುಟುಂಬ

ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು. ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂತಾರ ಸಿನಿಮಾದ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.

ನೆಲ್ಲಿಕಾರಿನಲ್ಲಿ ಭೀಕರ ಅಪಘಾತ : ಮಗು ಸೇರಿ ಮೂರು ಮಂದಿ ಮೃತ್ಯು

ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ

ತಲಪಾಡಿಯಲ್ಲಿ ಸರಣಿ ಕಳ್ಳತನ : ಪೊಲೀಸರ ವಿರುದ್ಧ ಸಾರ್ವಜನಿಕರು ಗರಂ

ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,

“ಡ್ರೈಫ್ ಡ್ರೈಫ್ ಆಟೋ“ ಸೇವೆ: ಅನ್ಯ ಕ್ಯಾಬ್ ಗಳಂತೆ ಚಾಲಕರಿಂದ ಕಮೀಷನ್ ಪಡೆಯುವುದಿಲ್ಲ, – ಸಂಸ್ಥೆ ಸ್ಪಷ್ಟನೆ

ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.

ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ

ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ನಿರ್ಮಿಸಲು ಸರ್ಕಾರ ಬದ್ಧ – ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಿಐಎ ಎಂಎಸ್ಎಂಇ ಎಕ್ಸಲೆನ್ಸ್

ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ : ಡಿ.14 ಎರಡು ರಾಜ್ಯದ ಮುಖ್ಯಮಂತ್ರಿ ಗಳ ಬೇಟಿಯಾಗಲಿರುವ ಗೃಹ ಸಚಿವ ಅಮಿತ್ ಶಾ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ

ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ : ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿ

ಮಂಗಳೂರಿನ ಕೊಟ್ಟಾರ ಚೌಕಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿಯನ್ನ ನಗರದ ಲಾಲ್‍ಭಾಗ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ, ಹೆಲ್ಮೆಟ್ ಧರಿಸದೇ ವಾಹನ ಚಲಾವಣೆ ಮಾಡುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳಿಂದ ರ್ಯಾಲಿ ನಡೆಸಲಾಯ್ತು. ಶ್ರೀ ಚೈತನ್ಯ