Home Archive by category Fresh News (Page 5)

ಪಡುಬಿದ್ರಿಯಲ್ಲಿ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಶುಭಾರಂಭ

ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ

ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಅಶಕ್ತ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ

ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್‌ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ

ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ , ಸುಳ್ಯಕ್ಕೆ ಚಂದ್ರಕಲಾ ಪ್ರಸನ್ನ

ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ/ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ

ಆ.31: ಅಲೋಶಿಯನ್ ಫೆಸ್ಟ್ 2024 : ಪಿಯು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಉತ್ಸವ ಆಯೋಜನೆ

ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ. ಸಭಾಂಗಣದಲ್ಲಿಶನಿವಾರ, ಆಗಸ್ಟ್ 31 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ“ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಬಳಿಕ ಮಾತಾಡಿದ ಸಹಆಯೋಜಕಿ ಭವ್ಯಾ ಶೆಟ್ಟಿ ”ಕಾಲೇಜಿನ ಹಳೆ

ಮಂಗಳೂರು: ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: 2022-23ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ

ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್ ಇದರ ಸಲಹೆದಾರ ಸ್ಟೀಫನ್ ಪಿಂಟೊ, ಕಿಟಾಳ್ ಅಂತರ್ಜಾಲ ಪತ್ರಿಕೆಯ ಸಂಪಾದಕ ಎಚ್. ಎಮ್. ಪೆರ್ನಾಲ್

ಬೈಂದೂರು : ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮ

ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ. ಮುಂಬಯಿ, ಬೆಂಗಳೂರಿನಂತಹ

ಕುಂದಾಪುರ: ಗಾಳ ಹಾಕಿ ಮೀನು ಹಿಡಿದ ಖ್ಯಾತ ನಟ ರಿಷಬ್ ಶೆಟ್ಟಿ

ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ

ಸುಳ್ಯ: ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ