Home Archive by category Fresh News (Page 505)

ಸುರತ್ಕಲ್ ಟೋಲ್ ಗೇಟ್ ತೆರವಿನ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ

ಉಚ್ಚಿಲ : ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಮೃತ್ಯು

ಲಾರಿ ಡಿಕ್ಕಿಯಾಗಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಪೊದ್ದರವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಪೊದ್ದಾ ಗುರುವಾರ ಬೆಳಿಗ್ಗೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದಾನೆ. ಕಾಪು ಬಳಿಯ ಆನೆಗುಂದಿ ಸರಸ್ವತಿ ಪೀಠದಿಂದ ಗಣೇಶನ ಹಬ್ಬಕ್ಕೆ ರಜೆಯಲ್ಲಿ ಊರಿಗೆ ತೆರಳಿದ್ದ ಏಳನೇ ತರಗತಿಯ ಸಮರ್ಥ್, ಮಂಗಳವಾರ ಸಂಜೆ ಬೆಳಗಾವಿಯ ಹುಕ್ಕೇರಿ ಭಗವಾನ್ ಗಲ್ಲಿಯ

ಮಂಗಳೂರು: ಬೋಂದೆಲ್‍ನ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಾತಿ ಅವಧಿ ವಿಸ್ತರಣೆ

ಮಂಗಳೂರಿನ ಬೋಂದೆಲ್‍ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಥಮ ಸೆಮಿಸ್ಟರ್ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್‍ಗಳಲ್ಲಿ ಪ್ರವೇಶ ಪಡೆಯಲು ಅವಧಿಯನ್ನು ವಿಸ್ತರಿಸಿದ್ದಾರೆ. ಸಂಸ್ಥೆಗಳ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಮೇರೆಗೆ ಪ್ರಥಮ ಸೆಮಿಸ್ಟರ್‍ನಲ್ಲಿ ಭರ್ತಿ ಆಗದ ಉಳಿಕೆ ಸೀಟುಗಳಿಗೆ ನಿಯಮಗಳ ಪ್ರಕಾರ ಸೆಪ್ಟಂಬರ್ 24ರ ಒಳಗೆ ಪ್ರವೇಶ ಪಡೆಯಲು ಪ್ರವೇಶಾತಿ

ಗುಂಡ್ಲುಪೇಟೆ : ನೀರಿಲ್ಲದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಬ್ಬಳ್ಳಿ ಗ್ರಾಮದ ಮಹೇಶ್ ಎಂಬುವರ ಜಮೀನಿನಲ್ಲಿ ನೀರು ಇಲ್ಲದ ಬಾವಿಯಲ್ಲಿ ಗಂಡು ಜಿಂಕೆಯೊಂದು ಬಿದ್ದಿದ್ದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಬಂಡೀಪುರ ಹುಲಿ ಯೋಜನೆಯ ಡಾ. ರಮೇಶ್ ಕುಮಾರ್ ರವರ ಮಾರ್ಗದರ್ಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರರವರ ನೇತೃತ್ವದಲ್ಲಿ..ವಲಯ ಅರಣ್ಯ ಅಧಿಕಾರಿ ಡಾ. ಲೋಕೇಶ್ ಹಾಗೂ ಪಶು ವೈದ್ಯರಾದ

ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ : ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಆಚರಣೆ

ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಅವರು ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟು ಹಬ್ಬ ಅಭಿನಂದನಾ ಸಮಿತಿ , ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ ಇವುಗಳ ನೇತೃತ್ವದಲ್ಲಿ ರಮಾನಾಥ ರೈ ಅವರ 71ನೆಯ

ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು  ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್‌ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ  ಕೂಡ ಒಂದು.

ಜಿಲ್ಲಾಧಿಕಾರಿಯವರ ಮೊಬೈಲ್ ನಂಬರ್ ಹ್ಯಾಕ್:ಮೋಸ ಹೋಗದಂತೆ ಡಿಸಿ ಮನವಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ.

ಕಡಬದಲ್ಲಿ ಜಿಲ್ಲಾ ಮಟ್ಟದ ವಿಶ್ವ ಸಾಕ್ಷರತಾ ದಿನಾಚರಣೆ: ಸಾಕ್ಷರತೆಯಿಂದ ಸ್ವಾವಲಂಭಿ ಬದುಕು: ಶೀನ ಶೆಟ್ಟಿ

ಒಂದು ಕುಟುಂಬ ಸಂತೋಷದಿoದ ಜೀವನ ಸಾಗಿಸಬೇಕಾದರೆ ಆ ಕುಟುಂಬದ ಎಲ್ಲರೂ ಸಾಕ್ಷರಸ್ಥರಾಗಿರಬೇಕು. ಅರಿವು, ಶಿಕ್ಷಣ, ಮಾಹಿತಿಯೇ ಸಾಕ್ಷರತೆ. ಸಾಕ್ಷರತೆಯಿಂದ ಮಾತ್ರ ಸ್ವಾವಲಂಭಿ ಬದುಕನ್ನು ನಡೆಸಬಹುದು ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಹಾಗೂ ಜನಶಿಕ್ಷಣ ಟ್ರಸ್ಟ್ ನ ನಿರ್ದೇಕರಾದ ಶೀನ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಬುಧವಾರ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯ, ದ.ಕ.ಜಿ.ಪಂ.ಮoಗಳೂರು, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯಿತಿ ಕಡಬ

ಬಾವಿಗೆ ಬಿದ್ದು ನರಳಾಡುತ್ತಿದ್ದ ಯುವತಿಯ ರಕ್ಷಣೆ

50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀ ವಿಟ್ಲ ಮತ್ತು ತಂಡದವರು ಯುವತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಬಳಿಕ ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ

ಕುಡಿತದ ಮತ್ತಿನಲ್ಲಿ ತಮ್ಮನಿಂದಲೇ ಅಣ್ಣನ ಕೊಲೆ

ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರರವರು ಭೇಟಿ ನೀಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗರವರ ಪುತ್ರ ಗಣೇಶ್ ಬಂಗೇರ(54) ಮೃತದುರ್ದೈವಿಯಾಗಿದ್ದಾರೆ. ಮೃತರ ಸಹೋದರ ಪದ್ಮನಾಭ ಬಂಗೇರ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಸಹೋದರರಿಬ್ಬರಿರೂ