Home Archive by category Fresh News (Page 510)

ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ

ಪಡುಬಿದ್ರಿ ಖಾಸಗಿ ಬಸ್‍ನ ಟಯರ್ ಸ್ಪೋಟ, ಪ್ರಯಾಣಿಕನಿಗೆ ಗಾಯ

ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಬಸ್ಸಿನ ಟಯರ್ ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ

ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಭೀಕರ ಅಪಘಾತ

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು,

ಚಿತ್ರಕಲೆ: ವಿರಾಟ್ ಕೃಷ್ಣ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಸೂಚನೆಯಂತೆ ಕಬ್,ಬುಲ್ ಬುಲ್,ಸ್ಕೌಟ್ಸ್, ಗೈಡ್ಸ್, ರೋವರ್ಸ್,ರೇಂಜರ್ಸ್ ವಿದ್ಯಾರ್ಥಿಗಳಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ‌ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಉಡುಪಿ ದಿವ್ಯಾಂಗರಿಂದ ಗಾಲಿಕುರ್ಚಿ ಜಾಥಾ

ಸೇವಾಭಾರತಿ (ರಿ.) ಬೆಳ್ತಂಗಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವರ ಜಂಟಿ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 08, 2022 ರ ಗುರುವಾರದಂದು, ಉಡುಪಿಯ ದಿವ್ಯಾಂಗರಿಂದ ಉಡುಪಿ ಗಾಂಧಿ ಸರ್ಕಲ್‍ನಿಂದ ಪುರಭವನದ ವರೆಗೆ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ದಿವ್ಯಾಂಗರು ತಮ್ಮ ವೀಲ್ ಚೇರ್ ಬಳಸಿ ವಿಭಿನ್ನವಾದ ಸ್ಟಂಟ್‍ಗಳನ್ನು ಮಾಡಿ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಈ

ನೀಟ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್ ಪದವಿ

ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಸುಂದರಕಾಂಡ ಪ್ರವಚನ

ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.

ಬೆಳ್ಳಾರೆ ಜ್ಞಾನದೀಪದಲ್ಲಿ ಪೂ. ಪ್ರಾ. ಶಾಲಾ ಶಿಕ್ಷಕಿಯರ ಚೈತನ್ಯ ತರಬೇತಿ ಕಾರ್ಯಗಾರ

ಯಾವ ಮಗುವಿನಲ್ಲೂ ಬೇಧಭಾವ ಮಾಡದೆ ನಮ್ಮ ಮಗುವಿನಂತೆ ಪ್ರೀತಿ ತೋರಿಸಿ ಝೀರೋದಿಂದ ಹೀರೋ ಮಾಡುವ ಮಹತ್ತರ ಜವಾಬ್ಧಾರಿ ಪೂರ್ವ ಪ್ರಾಥಮಿಕ ಶಿಕ್ಷಕಿಯರ ಮೇಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಂದನಾ ರೈ ಕಾರ್ಕಳ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ದಿ. ಗಂಗಾಧರ ಬೆಳ್ಳಾರೆ ಸ್ಮರಣಾರ್ಥ ನಡೆದ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ

ಮಂಗಳೂರು ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆ

ಮಂಗಳೂರು,ಸೆ.09(ಕ.ವಾ):- ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು. ಶಾಸಕರಾದ ಭರತ್

ಗೊನ್ಝಾಗ ಶಾಲೆಯಲ್ಲಿ ಆರೋಗ್ಯ ಅಭಿಯಾನ

ವಿಶ್ವ ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ಸಂತ ಅಲೋಷಿಯಸ್ ಗೊನ್ಝಾಗ ಶಾಲೆಯಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಪಿ ವಿಭಾಗ, ಮಂಗಳೂರು ರೌಂಡ್ ಟೇಬಲ್ 115 ಹಾಗೂ ಮಂಗಳೂರು ಲೇಡೀಸ್ ಸರ್ಕಲ್ 82 ಇವರ ಸಹಯೋಗದಿಂದ 1 ರಿಂದ 10 ತರಗತಿಯ ಮಕ್ಕಳಿಗಾಗಿ ಆರೋಗ್ಯ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಮಂಗಳೂರಿನ ಪ್ರತಿಷ್ಠಿತ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ ರಿಂಕು ರೋಷನ್ ಮಾತನಾಡಿ ಉತ್ತಮ ಆಹಾರ ಸೇವನೆ,