Home Archive by category Fresh News (Page 54)

ಸುಳ್ಯ: ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

ಸುಳ್ಯ: ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ

ಮೂಡುಬಿದಿರೆ: ಸಮಾಜ ಮಂದಿರದಲ್ಲಿ 75ನೇ ಗಣರಾಜ್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು. ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸಿ ಮಾಹಿತಿ

ಮಂಗಳೂರು : ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾದಿ ರಾಷ್ಟ್ರ ಭಾರತ ಆಗಿದ್ದು, ನಮ್ಮ ಸಂವಿಧಾನ ಅತ್ಯಂತ ಸುದೀರ್ಘ ಸಂವಿಧಾನ ಆಗಿರುತ್ತದೆ. ಇಂತಹ ಪವಿತ್ರ ಸಂವಿಧಾನವನ್ನು ರಕ್ಷಿಸಲು ನಾವೆಲ್ಲರೂ

ಇಂಡಿಯ ಮೈತ್ರಿಗೆ ಮುತ್ತಡೆ

ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ ಬದಲಾಗಿರುವುದು ಚರಿತ್ರೆ. ಮಮತಾ ಬ್ಯಾನರ್ಜಿಯವರು ರಾಜೀವ್ ಗಾಂಧಿಯವರ ಮೂಲಕ ಕಾಂಗ್ರೆಸ್ ಹೊಕ್ಕು ಆಮೇಲೆ

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,

ರಾಜ್ಯದ ಜವಾಬ್ದಾರಿ ಮರೆತು ಕೇಂದ್ರವನ್ನು ದೂರಬೇಡಿ : ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ

ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್