Home Archive by category Fresh News (Page 745)

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ

ಪಡುಬಿದ್ರಿ ಜಂಕ್ಷನ್‌ ನಲ್ಲಿ ಟ್ಯಾಂಕರ್ ಕಂಟೈನರ್ ಡಿಕ್ಕಿ : ಸಂಚಾರ ಅಸ್ತವ್ಯಸ್ತ

ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್‌ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್‌ನಲ್ಲಿ ಕಾರ್ಕಳ ರಸ್ತೆಗೆ ತಿರುಗುತ್ತಿದ್ದ ವೇಳೆ, ಹಿಂದಿನಿಂದ ಇಂಧನ ಏರಿಕೊಂಡು ಬಂದ ಟ್ಯಾಂಕರ್ ಚಾಲಕ, ಟ್ಯಾಂಕರನ್ನು

ಮಂಜೇಶ್ವರ: ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ

ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಕೆ. ಆರ್. ಜಯಾನಂದ ನೆನಪಿನ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು

ಉಡುಪಿಯಲ್ಲಿ ಕಾಲು ಕೊಳೆತು ಅಸಹಾಯಕ ಸ್ಥಿತಿಯಲ್ಲಿದ್ದ ಬೀದಿ ಶ್ವಾನದ ರಕ್ಷಣೆ

ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಆ ಬಳಿಕ ಮಣಿಪಾಲದ ಶ್ವಾನ ಪುರ್ವಸತಿ ಕೇಂದ್ರದಲ್ಲಿ ಆಶ್ರಯ ಒದಗಿಸಿದರು. ಬಬಿತಾ ಮಧ್ವರಾಜ್

ವಾರಾಂತ್ಯದ ಕರ್ಫ್ಯೂಗೆ ವಿಟ್ಲ ಪೇಟೆ ಸಂಪೂರ್ಣ ಬಂದ್

ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ

ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲಿಟ್ ಮಿಲ್ಕಾ ಸಿಂಗ್ ವಿಧಿವಶ

‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್

ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂ ಗೆ ಮನವಿ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಸಲ್ಲಿಸಿದರು.ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ

ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ: ಶಾಸಕರಿಂದ ಪಂಚಾಯತ್ ಗಳೊಂದಿಗೆ ನಿರಂತರ ಸಭೆ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು. ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯ ಸಮಗ್ರ ಮಾಹಿತಿ ನೀಡಿದರು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಂದ ಸವಾಲಿನ ಮಧ್ಯೆ ಕಾರ್ಯ: ಶಿವಾನಂದ ತಗಡೂರು

ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು ಭೇಟಿ ಮಾಡಿ. ಅಗಲಿದ ಪತ್ರಕರ್ತರಿಗೆ ಸಂತಾಪ ಸೂಚಿಸಿ ಮಾತನಾಡುತ್ತಿದ್ದರು. ಕಳೆದ ಬಾರಿ 31 ಮತ್ತು