Home Archive by category Fresh News (Page 765)

ಹೆಜಮಾಡಿಯಲ್ಲಿ ಆಕ್ಸಿಜನ್ ಗಾಳಿಗೆ ಬಿಡಲಾಯಿತೇ..!: ವೀಡಿಯೋ ವೈರಲ್

ಆಂಧ್ರಪ್ರದೇಶ ನೋಂದಾಯಿತ ಸಂಖ್ಯೆಯ ಟ್ಯಾಂಕರೊಂದರಲ್ಲಿದ್ದ ಆಕ್ಸಿಜನನ್ನು ಹೆಜಮಾಡಿ ಬಳಿ ಗಾಳಿಗೆ ಬಿಡುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಜಮಾಡಿಯ ಡಾಬದ ಬಳಿ ಲಾರಿಗಡ್ಡವಾಗಿ ನಿಂತು ಆಕ್ಸಿಜನ್ ತುಂಬಿತ್ತು ಎನ್ನಲಾದ ಟ್ಯಾಂಕರ್‌ನಿಂದ ಅದರ ನಿರ್ವಾಹಕ, ಚಾಲಕರೇ ಆಕ್ಸಿಜನ್ ಗಾಳಿಗೆ ಬಿಟ್ಟಿದ್ದು ಇದನ್ನು ಕಂಡ ಸ್ಥಳೀಯ ಬಾಲಕರು ಮೊಬೈಲ್ ಮೂಲಕ

ತಂಡದಿಂದ ಯುವಕನಿಗೆ ಹಲ್ಲೆ

ಉಳ್ಳಾಲ: ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಡೆದಿದೆ. ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾತದ್ವ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ದಿವಾಕರ್ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ

ಶ್ರೀನಿವಾಸ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ: ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೊಡುಗೆ

ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ ಇವರು ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.  

ಪ್ರತಿದಿನ 1 ಕೋಟಿ ಮಂದಿಗೆ ಲಸಿಕೆ : ಸರಕಾರಕ್ಕೆ ನಿರ್ದೇಶನ ನೀಡಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ

ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆಗೆ ಕೇಂದ್ರದ ತಂಡ ಭೇಟಿ ನೀಡಲಿದೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ ರಸ್ತೆ ಹಾನಿ, ಕಡಲ್ಕೊರೆತ ಮತ್ತಿತರ ಹಾನಿಗಳ ಕುರಿತು ಪರಿಹಾರಕ್ಕಾಗಿ ರೂ. 125 ಕೋಟಿ ನಷ್ಟ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಲಸಿಕೆ ವಿಚಾರದಲ್ಲಿ ಅವ್ಯವಹಾರ ನಡೆಸುವ ದೌರ್ಭಾಗ್ಯ ಬಿಜೆಪಿಗೆ ಬಂದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್

 ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ

ಉಚಿತವಾಗಿ ಲಸಿಕೆ ನೀಡುವ ಯೋಜನೆ ರೂಪಿಸುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ

ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ

ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ