Home Archive by category Fresh News (Page 817)

ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ  ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ರಂಜಿತ್ ( 28) , ಅವಿನಾಶ್

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ

ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಆಹಾರ ಸಾಮಾಗ್ರಿ ವಿತರಣೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್ ಇದರ ಬಹಳ ಮಹತ್ವಾಕಾಂಕ್ಷೆ ಯೋಜನೆ ರಾಜ್ಯದ ಎಲ್ಲಾ ಅರ್ಚಕರಿಗೆ ಈ ಕೊರೊನಾ ಸಂದರ್ಭದಲ್ಲಿ ನಾವು ಸಹಕಾರವನ್ನು ಕೊಡಬೇಕೆಂಬ ಕಳಕಳಿಯಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅದಕ್ಕಾಗಿ ತಾಲೂಕಿನ ಎಲ್ಲಾ

ಆರೋಗ್ಯ ಕೇಂದ್ರ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದ : ಸಚಿವ ಗೋಪಾಲಯ್ಯ

ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು.  ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ ಪಡೆದ ಸಚಿವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.

ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು : ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು

ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸಲಾಯಿತು, ಇದು ವಿದ್ಯಾರ್ಥಿಗಳಿಗೆ ಮತ್ತು ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಮ್ಮ

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.