ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.
ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ
ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ
ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಹಾಗೂ ಆತ ಪರಾರಿಯಾಗಲು ಬಳಸಿದ್ದ ಕಾರನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಗೋವಾದಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಆರೋಪಿಯನ್ನು ವಾಪಾಸ್ ಕರೆತರುವ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವೀರಯೋಧ (ನಿವೃತ್ತ) ಲಾರೆನ್ಸ್ ಡಿಸೋಜ ಪಣಪಿಲ ಇವರು ನಿಧನರಾಗಿದ್ದು ನಿವೃತ್ತ ಸೈನಿಕರ ಸಂಘ ಮೂಡುಬಿದಿರೆ ಇವರಿಂದ ಅಂತಿಮ ಗೌರವ ಸಲ್ಲಿಸಲಾಯಿತು. ದೇಶದ ತ್ರಿವರ್ಣ ಧ್ವಜವನ್ನು ಮೃತದೇಹದ ಮೇಲೆ ಹೊದಿಸಿ ಸರ್ಕಾರಿ ಸಮಾನ ಗೌರವ ಅರ್ಪಿಸಲಾಯಿತು. ಮೃತ ಯೋಧ ಲಾರೆನ್ಸ್ ಡಿಸೋಜರವರು ಭಾರತೀಯ ಭೂಸೇನೆಯಲ್ಲಿ ಸುಮಾರು ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರ, ಅಲಹಾಬಾದ್ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದರು. ೯೮
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ
ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ
ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ


















