ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ವಿಧಾನಸಭೆ-
ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್‌ಐ, ಸಿಪಿಐಎಮ್ ಮತ್ತು ಜೆಎಮ್‌ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ,
ಕೃಷಿಕರ ಜೀವನಾಡಿ ನೀರಿನ ಮೂಲಕ್ಕೆ ಯುಪಿಸಿಎಲ್ ಕಂಪನಿ ಗುಪ್ತವಾಗಿ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಸ್ಥಳೀಯ ಮಳೆಯೊರ್ವರು ಆರೋಪಿಸಿದ ಮೇರೆಗೆ ಉಡುಪಿ ಪರಿಸರ ಅಧಿಕಾರಿಗಳ ತಂಡ ಪರಿಶೀಲಿಸಿ ಬಾವಿ, ತೊರೆ ಸಹಿತ ಇತರೆ ನೀರಿನ ಮೂಲಗಳಿಂದ ನೀರು ಸಂಗ್ರಹಿಸಿ ಪ್ರಯೋಗಲಯಕ್ಕೆ ಪರೀಕ್ಷೆಗಾಗಿ ರವಾನಿಸಿದ್ದಾರೆ. ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರಿನ ಕೃಷಿಕ ಕರಿಯಶೆಟ್ಟಿ ಎಂಬವರ ಮನೆಯ ಸುತ್ತಮುತ್ತಲ ಹತ್ತಾರು ಮನೆಗಳಿದ್ದು ಎಲ್ಲರೂ ಕೃಷಿಯನ್ನೇ ನಂಬಿ ಜೀವನ
ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ
ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.


















