Home Archive by category Fresh News (Page 898)

ಆಸ್ಕರ್ ಫೆರ್ನಾಂಡಿಸ್ ರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ

ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆ ಆರಂಭ

ಮಂಗಳೂರಿನ ಪ್ರಸಿದ್ಧ ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆಯು ಉಡುಪಿಯ ತೆಂಕಪೇಟೆಯಲ್ಲಿರುವ ಹೆಡ್‌ಪೋಸ್ಟ್ ಆಫೀಸಿನ ಮುಂಭಾಗದಲ್ಲಿರುವ ಶ್ರೀರಾಮ್ ಆರ್ಕೇಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತ್ತು. ನೂತನ ಶಾಖೆಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದರಘುಪತಿ ಭಟ್, ಇವರು ನೇರವೇರಿಸಿದರು. ದೀಪ ಪ್ರಜ್ವಲನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ

ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮ ಕ್ಷೇತ್ರದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಜಗನ್ನಾಥ ಶೆಟ್ಟಿ ಬಾಳ ಅವರು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಕಳೆದ 16 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಸಿನಿಮಾ ಕ್ಷೇತ್ರದ ವರದಿಯನ್ನು ಮಾಡುವ ಮೂಲಕ ಪ್ರಸಿದ್ಧಿಯಾಗಿದ್ದಾರೆ. ಅವರಿಗೆ 2017ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು

ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು : ಮಾಜಿ ಸಚಿವ ಆಂಜನೇಯ

ಮಂಗಳೂರು:  ಬಿ.ಎಸ್  ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾಜಿ ಸಚಿವ ಆಂಜನೇಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು.ಬಿಜೆಪಿ ಸರ್ಕಾರ ವಾಮಮಾರ್ಗದಿಂದ ಬಂದದ್ದು. ಜನಾದೇಶದಿಂದ ಬಂದದ್ದು ಅಲ್ಲ. ಶಾಸಕರನ್ನು ಖರೀದಿ ಮಾಡ್ಕೊಂಡು ಸರ್ಕಾರ ರಚನೆ ಮಾಡಿತ್ತು.ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಸರ್ಕಾರ ಕೂಡಾ ಅಲ್ಲ. ಕಾಂಗ್ರೆಸ್, ಜೆಡಿಎಸ್ ನಿಂದ ಶಾಸಕರನ್ನು ಖರೀದಿ ಮಾಡಿ ಜನಸ್ನೇಹಿ ಸರ್ಕಾರ ಅಂದ್ರು. ಇದು ಜನಸ್ನೇಹಿ ಅಲ್ಲ, ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಹೆಚ್.

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ

ಪುತ್ತೂರಿನಲ್ಲಿ ಕಾರ್ಗಿಲ್ ವಿಜಯ್ ದಿವಸ ಆಚರಣೆ

ಪುತ್ತೂರು: ಕಾರ್ಗಿಲ್ ಯುದ್ಧದ ಬಳಿಕ ರಾಷ್ಟ್ರ ಭಕ್ತಿಯ ಅನಾವರಣಗೊಂಡಿದ್ದು, ಕಾರ್ಗಿಲ್ ಯುದ್ಧದಲ್ಲಿ ಗಳಿಸಿದ ವಿಜಯವು ಎಲ್ಲಾ ದೇಶವಾಸಿಗಳಿಗೆ ಪ್ರೇರಣೆಯಾಗಿದೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ ಸೈನಿಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನ ಮಿನಿ ವಿಧಾನ ಸೌಧದ ಮುಂಬಾಗದಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ

ಕಟ್ಟಡ ಕಾರ್ಮಿಕರ ಆಹಾರ ಕಿಟ್ ವಿತರಣೆಯಲ್ಲಿ ತಾರತಮ್ಯ: ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

ಕುಂದಾಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 20 ಲಕ್ಷ ಆಹಾರ ಕಿಟ್ ಗಳನ್ನು ಖರೀದಿಸಿ ಎಲ್ಲರಿಗೂ ನೀಡದೇ ಬಹುತೇಕ ಅನರ್ಹ ಕಟ್ಟಡ ಕಾರ್ಮಿಕರಿಗೆ ಬೈಂದೂರು ಶಾಸಕರು ವಿತರಿಸುತ್ತಿರುವುದನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಶಾಸಕರು ಹಂಚುತ್ತಿರುವ ಆಹಾರ ಕಿಟ್ ಗಳನ್ನು ಗ್ರಾಮಪಂಚಾಯತ್ ನ ವ್ಯಾಪ್ತಿಯಲ್ಲಿರುವ ಎಲ್ಲಾ ನೋಂದಾಯಿತ ಕಾರ್ಮಿಕರಿಗೂ ನೀಡದೇ ತಾರತಮ್ಯ ಮಾಡಲಾಗುತ್ತಿದೆ.

ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದೀಗ ಬಿಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ