ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು
ಕುಂದಾಪುರ: ಸೈಕ್ಲಾನ್, ಸುನಾಮಿಯಂತಹ ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಅವರು ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ
ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಕಳಕ್ಕೆ ಬರಮಾಡಿಕೊಳ್ಳಲು ಆಹ್ವಾನಿಸುವ ಜತೆಗೆ,
ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು ವಿನೋದ್ ವಾಲ್ಟರ್ ಪಿಂಟೊ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರ ಆರೋಪವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಾದ್ಯವಾಗಿಲ್ಲ. ತೀವ್ರ
ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ ಕೆರೆ ನಿಸರ್ಗಧಾಮದ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ ಆವರಣದಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನವನ್ನು ಶುಕ್ರವಾರ ಸಾಯಂಕಾಲ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪರಿಸರವನ್ನು ನಾವು ಸಂರಕ್ಷಿಸಿದಲ್ಲಿ
ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣ ಜಖಂಗೊಂಡಿದ್ದು 5 ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ. ಸೋಮನಾಥ ಕುಲಾಲ್ ಎಂಬವರಿಗೆ ಸೇರಿದ ಈ ಮನೆಯನ್ನು ನವೀನ್ ಎಂಬವರಿಗೆ ವಾಸ್ತವ್ಯಕ್ಕಾಗಿ ಬಾಡಿಗೆಗೆ ನೀಡಲಾಗಿತ್ತು. ಅವರು ಪತ್ನಿ ಪವಿತ್ರ ಹಾಗೂ ಮಗಳೊಂದಿಗೆ ಈ ಮನೆಯಲ್ಲಿ
ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಸಂಜೆ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನೆಗೆ ಮುಂದಾಗಿದ್ದ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,ಇಂದು ನಗರದ ಜಪ್ಪಿನಮೊಗರು, ಜಲ್ಲಿಗುಡ್ಡ,ಕಾವೂರು,ಶಕ್ತಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ಜರುಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಜಪ್ಪಿನಮೊಗರುನಲ್ಲಿ CPIM ಮಹಿಳಾ ಕಾರ್ಯಕರ್ತೆಯರು
ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು. ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು ಲಿಫ್ಟ್‌ನಲ್ಲಿ ತೆರಳಿದ್ದರು. ಲಿಫ್ಟ್ ಮೇಲೇರಿದ ಸ್ವಲ್ಪ ಕ್ಷಣದಲ್ಲಿ ನಿಂತುಕೊಂಡಿತ್ತು. ಲಿಫ್ಟ್‌ನಲ್ಲಿ ಮೂವರು ಸಿಲುಕಿಕೊಂಡು ಗಾಬರಿಯಾಗಿದ್ದರು. ಈ ಹಿನ್ನೆಲೆ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳದ


















