Home Archive by category Fresh News (Page 902)

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಶೋಭಾ ಕರಂದ್ಲಾಜೆ ಸೇರಿದಂತೆ 43 ಮಂದಿ ನೂತನ ಸಚಿವರಾಗಿ ಪ್ರಮಾಣವಚನ

ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ಪುನರ್ ರಚನೆಯಾಗುತ್ತಿದೆ. 43 ಮಂದಿ ಕೇಂದ್ರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿಯ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ , ಒಡಿಶಾದ ಅಶ್ವಿನಿ ವೈಷ್ಣವ್, ಕರ್ನಾಟಕದ ಶೋಭಾ

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಡಿವಿಎಸ್ ಸೇರಿದಂತೆ ಆರು ಸಚಿವರು ರಾಜೀನಾಮೆ

ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ. ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಆರು ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ. ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಾಸ್ತಾವಿಕ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಮಾಜಿ ಹೋರಾಟಗಾರರಾದ ಎಸ್.ಆರ್.ಹೀರೇಮಠ್, ಮಾಜಿ ಸಚಿವರಾದ ಶಶಿಕಾಂತ್ ನಾಯಕ್,

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್

ಮೀನುಗಾರರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ: ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು