ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಐವರು ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್. ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಹರೀಶ್ ಪೂಂಜಾ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ನಕಲಿ ಆಡಿಯೋ
ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಇಂಜಿನಿಯರಿಂಗ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಂದ ಪರಿಶೀಲಿಸಿ, ಹೆಚ್ಚಿನ ಹಣ ನಮೂದಿಸಿದ್ದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು
ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ SDM ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಯಿಂದಲೇ ತನ್ನ ಸಹಪಾಠಿಗಳೊಂದಿಗೆ ತಂಡವನ್ನು ಕಟ್ಟಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಸಿದ ಶ್ರೀಗಳ ಪೂರ್ವಾಶ್ರಮ ಹೆಸರು ರಾಘವೇಂದ್ರ. ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ ಮಠವನ್ನು, ಮಠದ ಆಡಳಿತದಲ್ಲಿರುವ ದೇವಾಲಯಗಳನ್ನು , ಮಠದ ಲಕ್ಷಾಂತರ ಶಿಷ್ಯರನ್ನು ಧಾರ್ಮಿಕವಾಗಿ
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ
ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ
ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್‍ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್‍ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ 109 ರೂಪಾಯಿಯಾಗಿದೆ. ಮೊನ್ನೆ ಹಲಸಿನ ಬೀಜಕ್ಕೆ ಇಂದು ಮಾವಿನ ಎಲೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು.
ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.


















