ಪುತ್ತೂರು : ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ ಮನೆಯ ಸಮೀಪದ ಧರೆ ಕುಸಿತ ಗೊಂಡಿದ್ದರಿಂದ ಜಯಲಕ್ಷ್ಮೀ ಮತ್ತು ಕೆಳಭಾಗದಲ್ಲಿರುವ ನವೀನ್ ಎಂಬವರ
ಮಂಗಳೂರು: ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಡಿ ಭಾಗದಲ್ಲಿರುವ ದಕ್ಷಿಣ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ – ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ
ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಮೇಲೆ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹದಾಕಾರದ ಮರ ಬಿದ್ದ ಪರಿಣಾಮ
ಕಡಬ: ಶಾಲೆಗಳ ಗೋಡೆಗಳಲ್ಲಿ ವರ್ಣ ಚಿತ್ರಗಳು ಹೊಸದೇನಲ್ಲ. ಹೆಚ್ಚಿನ ಶಾಲೆಗಳಲ್ಲಿ ವರ್ಲಿ ಚಿತ್ರ ಸೇರಿದಂತೆ ವಿವಿಧ ಬಗೆಯ ವರ್ಣಾಲಂಕಾರಗಳನ್ನು ನಾವೆಲ್ಲರೂ ಕಂಡಿದ್ದೇವೆ. ಆದರೆ ಅದಕ್ಕೆಲ್ಲಾ ಭಿನ್ನವೆಂಬಂತೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕುಂತೂರು ಪದವು ಸರಕಾರಿ ಶಾಲೆಯ ಗೋಡೆಗಳೆಲ್ಲವೂ ದೇಶದ ವಿವಿಧ ರಾಜ್ಯಗಳ ಕಲೆ, ನೃತ್ಯ, ಜಾನಪದ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕಣ್ಮನ ಸೆಳೆಯುವ ವೈವಿಧ್ಯಮಯ ವರ್ಣ ಚಿತ್ತಾರಗಳಿಂದ ಕಂಗೊಳಿಸುತ್ತಿದೆ. ಈ ಬಗ್ಗೆ ಒಂದು
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ
ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು


















