Home Archive by category Fresh News (Page 921)

ಕುತ್ತಾರ್ ನಲ್ಲಿ ತೈಲ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆ

ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ, ಕುತ್ತಾರ್ ನಲ್ಲಿರುವ ಇಂಡಿಯನ್ ಪೆಟ್ರೋಲ್ ಪಂಪ್ ಮುಂಭಾಗ ಲಾಕ್ ಡೌನ್ ನಡುವೆಯೇ ಸಾಂಕೇತಿಕವಾಗಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಜಿಲ್ಲಾ ಸಮಿತಿ ಸದಸ್ಯ ಆಡ್ವಕೇಟ್ ನಿತಿನ್ ಕುತ್ತಾರ್,

ಕಾಂಗ್ರೆಸ್ ವಿರೋಧ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ: ಪುತ್ತೂರಿನಲ್ಲಿ ನಳಿನ್ ಕುಮಾರ್ 

ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯ ವಿರುದ್ಧ ನಳಿನ್

ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ NRI ಗಳಿಗೆ ಲಸಿಕೆ ನೀಡಲು ಡಿ.ಸಿ ಆದೇಶ: ಅನಿವಾಸಿ ಕನ್ನಡಿಗರಿಂದ ಸ್ವಾಗತ

ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದವು. ವೀಡಿಯೊ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ

ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ದೀಪಕ್ ರೈ ನೇಮಕ

ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಆದೇಶದಲ್ಲಿ

ವಿಜಯಪುರದಲ್ಲಿ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ವಿಜಯಪುರ: ಕೇಂದ್ರ ಸರಕಾರ ನಿರಂತರವಾಗಿ ತೈಲ ಬೆಲೆ ಏರಿಸುವ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪ್ರಕಾಲಿ ಅವರು ಆರೋಪಿಸಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಕಡಿಮೆ ಇದ್ದರು ಕೂಡ ಸರಕಾರ ಬೆಲೆಯನ್ನು ಗಗನಕ್ಕೆ ಏರಿಸುವ ಮೂಲಕ ಜನರ ಹಿತ

ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ

ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ