Home Archive by category Fresh News (Page 923)

ವಾಮಂಜೂರು ಟೈಗರ್ಸ್ ವತಿಯಿಂದ ರಕ್ತದಾನ ಶಿಬಿರ, ವೃಕ್ಷಾರೋಹಣ

ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ

ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ನಾಳೆಯಿಂದ ಶ್ರೀ ಕ್ಷೇತ್ರ

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ

ಪುತ್ತೂರು ಹನಿಟ್ರ್ಯಾಪ್ ಪ್ರಕರಣ: 30ಲಕ್ಷ ಕಳೆದುಕೊಂಡ ಯುವಕ: ಯುವತಿಯ ಬಂಧನ

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25)ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ

ವಂ.ಡಾ. ಜಾನ್ ಫೆರ್ನಾಂಡಿಸ್ ನಿಧನ

ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು (ಮೂಡುಬಿದಿರೆ), ಕಟಪಾಡಿ ಹಾಗೂ ಬೆಳ್ಮಣ್ ಚರ್ಚ್‌ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯದಲ್ಲಿ ಜು.5ರಿಂದ 3.0 ಅನ್‌ಲಾಕ್ ಜಾರಿ: ಮತ್ತಷ್ಟು ಸಡಿಲಿಕೆ ಮಾಡಿ ಸರ್ಕಾರ ಆದೇಶ

ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್

ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಟರ್ಪಾಲ್‍ಗಳ ವಿತರಣೆ

ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ

ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ