Home Archive by category Fresh News (Page 95)

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ

ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಐದು ವಾಹನಗಳು ಜಖಂ..!!

ಸುರತ್ಕಲ್‍ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಯೊಂದು ಆಕಸ್ಮಿಕವಾಗಿ ಹಿಂದಕ್ಕೆ ಚಲಿಸಿ, ನಿಲ್ಲಿಸಿದ್ದ ನಾಲ್ಕು ಕಾರು, ಒಂದು ಬೈಕ್‍ಗೆ ಗುದ್ದಿ ಹಾನಿ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಚಾಲಕ ಲಾರಿಯನ್ನು ನಿಲ್ಲಿಸಿ ಹೊರಗೆ ತೆರಳಿದ್ದ. ಏಕಾಏಕಿ ಹಿಂದಕ್ಕೆ ಚಲಿಸಿದ ಲೋಡ್ ಲಾರಿ ಡಿವೈಡರ್ ಬಳಿ ತಿರುವು ತೆಗೆದುಕೊಂಡು ಬಂದಿದೆ. ಇದರಿಂದ ಮಾರ್ಕೆಟ್ ಅಂಗಡಿಗೆ ಬಂದಿದ್ದ ಗ್ರಾಹಕರ ನಾಲ್ಕು

ಕೆ. ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ. ಷರೀಫಾರವರ ʼನೀರೊಳಗಣ ಕಿಚ್ಚುʼ ಕಥಾಸಂಕಲನ ಆಯ್ಕೆಯಾಗಿದೆ. ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ 2017ರಲ್ಲಿ ನಿವೃತ್ತಿಹೊಂದಿರುವ ಕೆ. ಷರೀಫಾ ಮುಸ್ಲಿಮ್

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವು

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಮುಂಜಾನೆ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯಮ್ ಕೊನ್ರಾಡ್ ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ

ಪುತ್ತೂರು : ಅಕ್ಷಯ ಕಲ್ಲೇಗನನ್ನು 58ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್..!

ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಬೆಳ್ತಂಗಡಿ: ತೆಕ್ಕಾರಿನಲ್ಲಿ ದೇವರ ಪುರಾತನ ಭಗ್ನ ವಿಗ್ರಹ ಪತ್ತೆ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆಯಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ್ದೆನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಪತ್ತೆಯಾಗಿವೆ. ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ ಮುತುವರ್ಜಿಯಿಂದ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಸಂಬಂಧ 5 ದಿನಗಳ ಹಿಂದೆ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗಿತ್ತು. ಜೋತಿಷಿ ವೆಂಕಟರಮಣ ಭಟ್