ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ
ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ
ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ ಆಸ್ಪತ್ರೆಗೆ 5 ವರ್ಷದಿಂದ ಯಾವುದೇ ಡಾಕ್ಟರ್ ಇಲ್ಲಿಗೆ ನೇಮಿಸಿರುವುದಿಲ್ಲ. ಇಲ್ಲಿ ಒಬ್ಬ ಸಹಾಯಕರು
ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ
ಜಿಲ್ಲೆಯ ಹಲವು ದಶಕಗಳ ವಿಮಾನ ನಿಲ್ದಾಣ ಪ್ರಾರಂಭದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಯಾಗಲಿದೆ. ನಾಳೆಯಿಂದಲೇ ಮಾರ್ಕಿಂಗ್ ಕಾರ್ಯ ಪ್ರಾರಂಬಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ವಿಮಾನ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಇದೊಂದು ಮಹತ್ವಾಕಾಂಕ್ಷಿ
ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಎಂಎಸ್‍ಎಐಎಲ್ ರದ್ದುಪಡಿಸಲು ಗ್ರಾಮದ ಹಲವು ಮುಖಂಡರು, ಮಹಿಳೆಯರಿಂದ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮೊಹರೆ ಹನಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ನಂತರ ಅಂಬೇಡ್ಕರ್ ವೃತ್ತದಲ್ಲಿ ಹಲವಾರು ಪ್ರಗತಿಪರ ಸಂಘಟನೆಯ ಮುಖಂಡರುಗಳು ಮಾತನಾಡಿ ಮಹಿಳೆಯರ ಹೋರಾಟಕ್ಕೆ ಬೆಂಬಲ
ಅರಕಲಗೂಡು: ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಕೊಣನೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ
ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿದ್ದು ಕುಡುಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮದ್ಯ
ಹಾಸನ :ಮುಂದಿನ ಅವಧಿಯ 21 ತಿಂಗಳು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಮುಂದುವರಿಯಲಿದೆ ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರದಲ್ಲಿ ಇರಲಿದ್ದಾರೆ . ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಯ