ಹಾಸನ: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ನವಾಜ್ (27) ಕೊಲೆಯಾದ ರೌಡಿಶೀಟರ್. ಹಾಸನ ಜಿಲ್ಲೆಯ ಅರಸೀಕೆರೆ ನಗರದ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೆಹಳ್ಳಿ ಸಮೀಪ ನಡೆದಿದೆ. ಮೂರು ವರ್ಷಗಳ ಹಿಂದೆ ಮೀನು ಹಿಡಿಯುವ ಸಂಬಂಧ ಎರಡು ಯುವಕರ ತಂಡದ ನಡುವೆ ಗಲಾಟೆ ನಡೆದು ಕೊನೆಗೆ ಆಂಬುಲೆನ್ಸ್                         
        
              ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಕೂಡ ರೈತರ ಸಂಕಷ್ಟದಲ್ಲಿದ್ದರೂ ಸಾಲ ಮನ್ನಾ ಮಾಡದೆ ರೈತರನ್ನು                         
        
              ಬೇಲೂರು ತಾಲೂಕಿನ ಮಲೆನಾಡು ಪ್ರದೇಶವಾದ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಯ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಂಡೆಕೆರೆ ಹಾಗೂ ನಾರ್ವೆ ಪೇಟೆ ಸಂಪರ್ಕಿಸುವ ಸೇತುವೆ ಮುಳುಗಡೆ ಯಾಗಿದೆ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆಬದಿಯ ಮರಗಳು ನೆಲಕಚ್ಚಿದ್ದು ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಕೆರೆ-ಕಟ್ಟೆ                         
        
              ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ ನೀಡಿ ಅತಿವೃಷ್ಠಿ ಪ್ರದೇಶವನ್ನು ಪರಿಶೀಲಿಸಿದರು. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಆದಷ್ಟು ಶೀಘ್ರವಾಗಿ ರಸ್ತೆ ದುರಸ್ತಿ ಪಡಿಸುವಂತೆ ಸೂಚಿಸಿದರು. ಅತೀವೃಷ್ಠಿ                         
        
              ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ. ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ                         
        
              ಇದು ಇತಿಹಾಸ ಕಂಡಿರುವ ಪುರಾತನ ಮಂಟಪ, ಈ ಮಂಟಪ ಇರುವುದು ಯಾವುದು ಕುಗ್ರಾಮದಲ್ಲಿ ಅಲ್ಲ ಬದಲಾಗಿ ಇತಿಹಾಸ ಪ್ರಸಿದ್ಧ ಶಿಲ್ಪ ಕಲೆಗಳ ತವರೂರೆಂದೇ ಪ್ರಖ್ಯಾತ ಗೊಂಡಿರುವ ಊರಿನಲ್ಲಿ, ಅನೇಕ ಭಾರಿ ಈ ಮಂಟಪವನ್ನು ಅಭಿವೃದ್ಧಿ ಪಡಿಸಲು ಮನವಿ ಮಾಡಿದರು ಈ ಭಾಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. ವಿಶ್ವ ವಿಖ್ಯಾತ ಬೇಲೂರು ಯಾರಿಗೆ ತಾನೆ ಗೊತ್ತಿಲ್ಲ ಹೇಳ್ರಿ,, ಈ ಪುಣ್ಯ ಕ್ಷೇತ್ರದ ದರ್ಶನಕ್ಕೆ                         
        
              ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ. ರಮೇಶ್, ಸಂಪತ್ ಮಾಸ್ಟರ್, ಸಾಮಾಜಿಕ ಹೋರಾಟಗಾರ ಪತ್ರಕರ್ತ ನೂರ್ ಅಹಮದ್                         
        
              ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಎಚ್‌ಆರ್‌ಪಿ ಭೂ ಹಗಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.   ಆಲೂರು ತಾಲ್ಲೂಕಿನ ಹೆಚ್‌ಆರ್‌ಪಿ  ಸಂತ್ರಸ್ತರಿಗೆ ಸಕಲೇಶಪುರ                         
        
              ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.   ಅವರು ಹಾಸನದಲ್ಲಿ ಸುದ್ದಿಗೋಷ್ಠಿ                         
        
              ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಬೇಟೆಯಾಡಲು ಬಳಸಿದ್ದ ಬಂಧೂಕು ಹಾಗೂ ವಾಹನಗಳನ್ನು                         
        
















