Home Archive by category kadaba (Page 2)

ಕಡಬ : ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢ ಶಾಲೆಗೆ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ 100 % ಫಲಿತಾಂಶ

ಕಡಬ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ಹೈಯರ್ ಗ್ರೇಡ್ ಮತ್ತು ಲೋಯರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅಂಜನಾ ಜೇಮ್ಸ್ 491 ಅಂಕ

ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಮಾರ್ಗದರ್ಶನ ಶಿಬಿರ

ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ

ಕಡಬ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಕಡಬ : ಮಾನಭಂಗ ಯತ್ನ ಪ್ರಕರಣ ಹಿನ್ನಲೆ – ಸಂತ್ರಸ್ತೆ ಮನೆಗೆ ಸಚಿವ ಎಸ್ ಅಂಗಾರ ಭೇಟಿ

ಕಾಣಿಯೂರು: ಬೆಡ್‌ಶೀಟ್ ಮಾರಾಟಕ್ಕೆಂದು ಕಾರಲ್ಲಿ ಬಂದಿದ್ದ ಇಬ್ಬರು ಆರೋಪಿಗಳಿಂದ ಮಾನಭಂಗ ಯತ್ನ ನಡೆದಿರುವ ಹಿನ್ನಲೆಯಲ್ಲಿ ಸಂತ್ರಸ್ತೆ ಮಹಿಳೆ ಮನೆಗೆ ಸಚಿವ ಎಸ್. ಅಂಗಾರ ಅ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬೆಡ್ ಶೀಟ್ ಮಾರಾಟಕ್ಕೆಂದು ಬಂದಿದ್ದ ಇಬ್ಬರು ಆರೋಪಿಗಳು ತನ್ನ ಮೇಲೆ ಮಾನಭಂಗ ಯತ್ನಿಸಿರುವ ಬಗ್ಗೆ ರಫಿಕ್ ಮತ್ತು ರಮೀಜುದ್ದೀನ್ ಎಂಬವರ ವಿರುದ್ಧ ದೋಳ್ಪಾಡಿ ಗ್ರಾಮದ ಕಟ್ಟ ಪರಿಶಿಷ್ಠ ಜಾತಿ ಮಹಿಳೆಯೋರ್ವರು ಅ.20ರಂದು ಕಡಬ ಪೋಲಿಸ್ ಠಾಣೆಗೆ

ಕಡಬ: ಮಕ್ಕಳಿಲ್ಲದ ಚಿಂತೆ: ವ್ಯಕ್ತಿ ಆತ್ಮಹತ್ಯೆ

ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಮಕ್ಕಳಿಲ್ಲದ ಪರಿಣಾಮ ಅದೇ ಕೊರಗಿನಲ್ಲಿ

ಕಡಬ : ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.

ಸವಣೂರಿನಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ : ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ,